ಉಡುಪಿ: ರೇಣುಕಾಚಾರ್ಯ, ಯೋಗಿ ನಾರೇಯಣ ಯತೀಂದ್ರ ಸೇರಿದಂತೆ ಹಲವು ದಾರ್ಶನಿಕರ ಸರಳ ಜೀವನ ನಡೆಸವುದರ ಜತೆಗೆ ಸಮಾಜದ ಅಂಕುಡೊಂಕುಗಳನ್ನು ತಿದ್ದಿ, ಸಮಾಜ ಸುಧಾರಣೆಗೆ ಮಾರ್ಗದರ್ಶನವನ್ನು ನೀಡಿದ್ದಾರೆ. ಇಂತಹ ಮಹನೀಯರುಗಳು ತತ್ವ, ಆದರ್ಶಗಳನ್ನು ಪ್ರತಿಯೊಬ್ಬರೂ ಪಾಲಿಸಿದಲ್ಲಿ ಮೌಲ್ಯಯುತ ಸಮಾಜ ನಿರ್ಮಾಣ ಸಾಧ್ಯ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಹೇಳಿದರು.


ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆಆಶ್ರಯದಲ್ಲಿ ನಡೆದ ರೇಣುಕಾಚಾರ್ಯ ಜಯಂತಿ ಮತ್ತು ಯೋಗಿ ನಾರೇಯಣ ಯತೀಂದ್ರ ಜಯಂತಿ (ಕೈವಾರ ತಾತಯ್ಯ) ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿಉಪ ತಹಶೀಲ್ದಾರ್ ಗಳಾದ ನವನೀತ್ ಹಾಗೂ ಜಯಲಕ್ಷ್ಮಿ, ಸಮುದಾಯದ ಸದಸ್ಯರು, ಜಿಲ್ಲಾಡಳಿತದ ಸಿಬ್ಬಂದಿ ಇದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಪ್ರಾಸ್ತಾವಿಕ ಮಾತನಾಡಿ ಸ್ವಾಗತಿಸಿದರು. ಸಿಬ್ಬಂದಿ ವರ್ಷಾ ಬಿ. ಕೋಟ್ಯಾನ್ ನಿರೂಪಿಸಿ, ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಜಿಲ್ಲಾ ಅಧ್ಯಕ್ಷ ಸಿದ್ಧಬಸಯ್ಯ ಚಿಕ್ಕಮಠ ವಂದಿಸಿದರು.



