ರಾಜ್ಯ ಬಜೆಟ್: ಉ.ಕ ಜಿಲ್ಲೆಯ ಕಾರವಾರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ 100 ಕೋಟಿ ಘೋಷಣೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಜನರ ಆರೋಗ್ಯ ರಕ್ಷಣೆಯ ಹಿತದೃಷ್ಟಿಯಿಂದ ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಾಗಿ ನಿರಂತರ ಹೋರಾಟ ನಡೆದಿದ್ದವು. ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ವಿವಿಧ ಸಂಘಟನೆಗಳು ನಿರಂತರ ಹೋರಾಟದ ಭಾಗವಾಗಿ ರಾಜ್ಯ ಸರಕಾರ ಬಜೆಟ್ ನಲ್ಲಿ 100 ಕೋಟಿ ವೆಚ್ಚದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆಗೆ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ಈಚೆಗೆ ಅವರು ಕಾರವಾರಕ್ಕೆ ಬಂದಿದ್ದ ವೇಳೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣದ ಬಗ್ಗೆ ಸುಳಿವು ನೀಡಿದ್ದರು. ಅದೇ ರೀತಿಯಾಗಿ ಈಗ ಬಜೆಟ್ ನಲ್ಲಿ 100 ಕೋಟಿ ಘೋಷಣೆ ಮಾಡಿದ್ದಾರೆ.

Leave a Reply

Your email address will not be published. Required fields are marked *