ಕಾರವಾರ: ಕಾರವಾರ ಉಪ ವಿಭಾಗದ ವ್ಯಾಪ್ತಿಯಲ್ಲಿ ವಾಹಕ ಬದಲಾವಣೆ ಕಾಮಗಾರಿ ಇರುವುದರಿಂದ ಇದೇ 8 ರಂದು ಬೆಳಗ್ಗೆ 9.30 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಕೆರವಡಿ ಫೀಡರ್ ನ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಕಾರವಾರ ಹೆಸ್ಕಾಂ, ಕಾರ್ಯ ಮತ್ತು ಪಾಲನಾ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನೀಯರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




