ಸಿದ್ದರಾಮಯ್ಯ 17 ನೇ ದಾಖಲೆ ಬಜೆಟ್ ನಲ್ಲಿ ಅಭಿವೃದ್ಧಿಗೆ ನೋಟ: ಹರೀಶ್ ಕುಮಾರ್

 

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ದಾಖಲೆಯ 17ನೇ ಬಜೆಟ್ ನಲ್ಲಿ ರಾಜ್ಯದ ಸಮಗ್ರ ಅಭಿವೃದ್ಧಿ ಹಾಗೂ ಜನಸಾಮಾನ್ಯರ ಕಲ್ಯಾಣವನ್ನು ಗಮನದಲ್ಲಿಟ್ಟುಕೊಂಡು ದಾಖಲೆಯ ಕಾರ್ಯಕ್ರಮಗಳನ್ನು ರೂಪಿಸಿರುವುದು ಶ್ಲಾಘನೀಯ ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಹರೀಶ್ ಕುಮಾರ್ ತಿಳಿಸಿದ್ದಾರೆ.

ರೈತ ಕಲ್ಯಾಣ, ಕೈಗಾರಿಕಾ ಪ್ರಗತಿ, ಪ್ರವಾಸೋದ್ಯಮ, ನೀರಾವರಿ, ತೋಟಗಾರಿಕೆ, ಹೈನುಗಾರಿಕೆ, ಮೀನುಗಾರಿಕೆ, ಮಹಿಳಾ ಸಬಲೀಕರಣ, ಯುವಕರಿಗೆ ಉದ್ಯೋಗಾವಕಾಶಗಳ ಸೃಷ್ಟಿ, ಪ್ರಾಥಮಿಕ ಮತ್ತು ಉನ್ನತ ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರ, ಗ್ರಾಮೀಣಾಭಿವೃದ್ಧಿ ಮತ್ತು ಮೂಲಸೌಕರ್ಯ ಅಭಿವೃದ್ಧಿಗೆ ಬಜೆಟ್ ಸಾಕಷ್ಟು ಆದ್ಯತೆ ನೀಡಿದೆ. ಇದು ಸುಸ್ಥಿರ ಬೆಳವಣಿಗೆಗೆ ದಾರಿ ಮಾಡಿಕೊಡಲಿದೆ ಎಂದರು.

ಕರಾವಳಿ ಪ್ರವಾಸೋದ್ಯಮ ಸಾಮರ್ಥ್ಯವನ್ನು ಸದುಪಯೋಗಪಡಿಸಿಕೊಳ್ಳಲು ಸಮಗ್ರ ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿ ಯೋಜನೆ ರೂಪಿಸಿರುವುದು ಜಾಗತಿಕ ಮಟ್ಟದಲ್ಲಿ ಮಂಗಳೂರನ್ನು ಪ್ರವಾಸಿ ತಾಣವಾಗಿ ಗುರುತಿಸಲು ಸಹಕಾರಿಯಾಗಲಿದೆ. ಮಂಗಳೂರಿನಲ್ಲಿ ಕೌಶಲ್ಯಾಭಿವೃದ್ಧಿ ಕೇಂದ್ರಗಳ ಸ್ಥಾಪನೆ ಮತ್ತು ಕೃತಕ ಬುದ್ಧಿಮತ್ತೆ ಆಧಾರಿತ ತರಬೇತಿಗಳಿಗೆ ಆದ್ಯತೆ ನೀಡಿರುವುದು ಯುವಜನತೆಯ ಉಜ್ವಲ ಭವಿಷ್ಯಕ್ಕೆ ಅಡಿಪಾಯ ಹಾಕಲಿದೆ. ಕರಾವಳಿಯ ಹೆದ್ದಾರಿ ಮತ್ತು ಮೂಲಸೌಕರ್ಯ ಅಭಿವೃದ್ಧಿ, ಮಂಗಳೂರು ಮೀನುಗಾರಿಕಾ ಮಹಾವಿದ್ಯಾಲಯದಲ್ಲಿ ಸೆಂಟರ್ ಆಫ್ ಎಕ್ಸಲೆನ್ಸ್ ಸ್ಥಾಪನೆ, ಮೀನು ಮಾರುಕಟ್ಟೆ ನಿರ್ಮಾಣ, ಬಂದರುಗಳು ಮತ್ತು ಸರಕು ಸಾಗಣೆ ವಲಯದ ಅಭಿವೃದ್ಧಿಗಾಗಿ ʻಸಮಗ್ರ ಮಲ್ಟಿಮೋಡಲ್ ಲಾಜಿಸ್ಟಿಕ್ಸ್ ನೀತಿʼ, ಅಡಿಕೆ-ತೆಂಗು ರೋಗ ನಿಯಂತ್ರಣಕ್ಕ ಒತ್ತು ನೀಡಿದೆ. ಇದು ಜಿಲ್ಲೆಯ ಉದ್ಯಮ, ಶಿಕ್ಷಣ ಮತ್ತು ಪ್ರವಾಸೋದ್ಯಮದ ಮೇಲೆ ಸಕಾರಾತ್ಮಕ ಪ್ರಭಾವ ಬೀರಲಿದೆ ಎಂದರು.

  1.  

Leave a Reply

Your email address will not be published. Required fields are marked *