
ಬೆಳ್ತಂಗಡಿ: ವಿದ್ಯಾರ್ಥಿ ಜೀವನದ ಪ್ರಮುಖ ಹಂತಗಳಲ್ಲಿ ಪಿಯುಸಿ ಶಿಕ್ಷಣವೂ ಒಂದು ಪ್ರಮುಖ ಹಂತ ಆಗಿದೆ. ಎಸ್ಸೆಸ್ಸೆಲ್ಸಿ ಬಳಿಕ ಮುಂದೇನು?” ಎಂಬ ಪ್ರಶ್ನೆ ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ಸಾಮಾನ್ಯವಾಗಿ ಮೂಡುತ್ತದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿ, ಸರಿಯಾದ ಮಾರ್ಗದರ್ಶನ ನೀಡುವ ಉದ್ದೇಶದಿಂದ ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜು ವತಿಯಿಂದ ಪ್ರಸ್ತುತ ಎಸ್ಸೆಸ್ಸೆಲ್ಸಿಯಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗಾಗಿ ಪ್ರತಿಭಾನ್ವೇಷಣೆ ಪರೀಕ್ಷೆ ಹಾಗೂ ವೃತ್ತಿ ಮಾರ್ಗದರ್ಶನ ಶಿಬಿರವನ್ನು ಮಾರ್ಚ್ 8 ರಿಂದ 11ರವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿದ್ಯಾರ್ಥಿಗಳು ತಮ್ಮ ಅನುಕೂಲಕರ ದಿನಗಳಲ್ಲಿ ಬಂದು ಪರೀಕ್ಷೆಯಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸುವ ಸಲುವಾಗಿ ನಾಲ್ಕು ದಿನಗಳ ಕಾಲ ಪರೀಕ್ಷೆಯನ್ನು ಆಯೋಜಿಸಲಾಗಿದೆ. ಪ್ರವೇಶ ಪರೀಕ್ಷೆ ಸಂಪೂರ್ಣ ಉಚಿತ ಆಗಿದ್ದು, ಪ್ರತಿದಿನ ಬೆಳಿಗ್ಗೆ 10 ಗಂಟೆಯಿಂದ 11.10 ರವರೆಗೆ ಹಾಗೂ ಮಧ್ಯಾಹ್ನ 2.30 ಗಂಟೆಯಿಂದ 3.40 ಗಂಟೆಯವರೆಗೆ ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನ ಕ್ಯಾಂಪಸ್‌ನಲ್ಲಿ ಪರೀಕ್ಷೆ ನಡೆಯಲಿದೆ ಎಂದು ತಿಳಿಸಿದ್ದಾರೆ.

ಪರೀಕ್ಷೆಯಲ್ಲಿ ಬಹು ಆಯ್ಕೆ ಪ್ರಶ್ನೆಗಳು ಇರುತ್ತವೆ. ವಿಜ್ಞಾನ ವಿಭಾಗದಿಂದ 30 ಪ್ರಶ್ನೆಗಳು ಹಾಗೂ ಗಣಿತ ವಿಭಾಗದಿಂದ 30 ಪ್ರಶ್ನೆಗಳು, ಒಟ್ಟು 60 ಪ್ರಶ್ನೆಗಳು ಇರಲಿದೆ. ಪರೀಕ್ಷೆ ಅವಧಿ 70 ನಿಮಿಷಗಳು ಆಗಿರುತ್ತದೆ. ಈ ಮೂಲಕ ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಉತ್ತಮ ವೇದಿಕೆ ಒದಗಿಸಲಿದೆ ಎಂದು ತಿಳಿಸಿದ್ದಾರೆ.
ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗೆ ವಿಶೇಷ ಬಹುಮಾನವಾಗಿ ಲ್ಯಾಪ್‌ಟಾಪ್ ನೀಡಲಾಗುವುದು. ಗಮನಾರ್ಹ ಸಾಧನೆ ಮಾಡಿದ ವಿಜೇತರಿಗೆ ಟ್ಯಾಬ್ ಬಹುಮಾನವಾಗಿ ನೀಡಲಾಗುತ್ತದೆ. ಜತೆಗೆ, ಪರೀಕ್ಷೆಯಲ್ಲಿ ಶೇ 90 ಕ್ಕಿಂತ ಅಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪಿಯುಸಿ ದಾಖಲಾತಿ ಸಂಪೂರ್ಣ ಉಚಿತ ಆಗಿದ್ದು, ಶೇ 75 ಕ್ಕಿಂತ ಅಧಿಕ ಹಾಗೂ ಶೇ 50 ಕ್ಕಿಂತ ಅಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪಿಯುಸಿ ದಾಖಲಾತಿಯಲ್ಲಿ ವಿಶೇಷ ರಿಯಾಯಿತಿ ನೀಡಲಾಗುವುದು. ನೋಂದಣಿಗಾಗಿ ಮೊಬೈಲ್ 7618775600 ಸಂಖ್ಯೆ ಸಂಪರ್ಕಿಸುವಂತೆ ತಿಳಿಸಿದ್ದಾರೆ.



