ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಯತೀಶ್ ಎನ್. ಅವರನ್ನು ನೇಮಕ ಮಾಡಿ ಸರಕಾರವು ಆದೇಶ ಹೊರಡಿಸಿದೆ.
2016 ರ ಕರ್ನಾಟಕ ಕೇಡರ್ ಐಪಿಎಸ್ ಅಧಿಕಾರಿ ಆಗಿರುವ ಯತೀಶ್ ಎನ್ ಅವರು ಮಂಡ್ಯ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಆಗಿ ಸೇವೆ ಸಲ್ಲಿಸುತ್ತಿದ್ದರು.
ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆಗಿದ್ದ ಸಿ. ಬಿ. ರಿಷ್ಯಂತ್ ಅವರನ್ನು ಬೆಂಗಳೂರಿನ ವೈರ್ ಲೆಸ್ ಎಸ್ ಪಿ ಆಗಿ ನೇಮಕ ಮಾಡಿ ಸರಕಾರವು ಆದೇಶ ಹೊರಡಿಸಿದೆ.