ಸಿರಸಿ: ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಸತೀಶ್ ಹೆಗಡೆ ಅವರು ಬುಧವಾರ ತಾಲೂಕಿನ ವಿವಿಧ ಗ್ರಾಮ ಪಂಚಾಯತ್ಗಳಿಗೆ ಭೇಟಿ ನೀಡಿ ಸ್ವಚ್ಛತಾ ಅಭಿಯಾನದಡಿ ಕೈಗೊಂಡ ಸ್ವಚ್ಛತಾ ಕಾರ್ಯ ಪರಿಶೀಲಿಸಿದರು.
ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಆದೇಶದ ಮೇರೆಗೆ ತಾಲೂಕಿನ ಎಲ್ಲಾ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಸ ಮುಕ್ತ ಮಾಡುವ ಉದ್ದೇಶದಿಂದ ‘ಸ್ವಚ್ಛತಾ ಅಭಿಯಾನದಡಿ ಬುಧವಾರ ತಾಲ್ಲೂಕಿನ 32 ಗ್ರಾಮ
ಪಂಚಾಯತ್ಗಳ ಸಾರ್ವಜನಿಕ ಸ್ಥಳಗಳು, ಬಸ್ ಸ್ಟ್ಯಾಂಡ್, ಆರೋಗ್ಯ ಕೇಂದ್ರದ ಸುತ್ತಲೂ ಸ್ವಚ್ಛಗೊಳಿಸಲಾಯಿತು.
ಎಲ್ಲಾ ಬಸ್ ನಿಲ್ದಾಣಗಳು ಹಾಗೂ ಸಾರ್ವಜನಿಕ ಆಸ್ತಿಗಳಲ್ಲಿ ಬಿಸಾಡಿದ ಕಸವನ್ನು ತೆಗೆದು, ರಸ್ತೆ ಬದಿಗಳಲ್ಲಿ ಸಿಸಿ ಟಿವಿಗಳನ್ನು ಅಳವಡಿಸಿ ಸಾರ್ವಜನಿಕ ಸ್ಥಳಗಳಲ್ಲಿ ಕಸ ಬಿಸಾಡುವವರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದರು.
ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ವ್ಯವಸ್ಥಾಪಕ ಸುಬ್ರಾಯ್ ಭಟ್, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಸಿಬ್ಬಂದಿ, ಐಇಸಿ ಸಂಯೋಜಕರು ಇದ್ದರು.