Breaking News

ಉ.ಕ ಜಿಲ್ಲೆಯಲ್ಲಿ ಮಳೆ ಮತ್ತಷ್ಟು ಬಿರುಸು, ಶಾಲೆಗಳಿಗೆ ಜುಲೈ 20 ರಂದು ರಜೆ ಘೋಷಣೆ: ಡಿಸಿ ಲಕ್ಷ್ಮಿಪ್ರಿಯಾ ಆದೇಶ

 

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಅರ್ಭಟ ಮುಂದುವರೆದಿದ್ದು, ಜಿಲ್ಲೆಯ ಹಲವು ಕಡೆಗಳಲ್ಲಿ ಕುಡ್ಡ ಕುಸಿತದ ಪ್ರಕರಣಗಳು ವರದಿ ಆಗಿವೆ. ಹಳ್ಳ, ಕೊಳ್ಳ, ತೋಡು, ನದಿಗಳು ಉಕ್ಕಿ ಹರಿಯುತ್ತಿದ್ದು ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಾದ್ಯಂತ ಎಲ್ಲ ಶಾಲೆ ಹಾಗೂ ಕಾಲೇಜುಗಳಿಗೆ ಜುಲೈ 20 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಅವರು ಶುಕ್ರವಾರ ಆದೇಶ ಹೊರಡಿಸಿದ್ದಾರೆ.

  1.  

ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ, ಸರಕಾರಿ ಹಾಗೂ ಅನುದಾನಿತ ಖಾಸಗಿ ಶಾಲೆ, ಪದವಿ ಪೂರ್ವ ಕಾಲೇಜು, ಡಿಪ್ಲೊಮಾ, ಐಟಿಐ ಕಾಲೇಜಿನ ವಿದ್ಯಾರ್ಥಿಗಳಿಗೆ ಶನಿವಾರ ರಜೆ ನೀಡಲಾಗಿದೆ. ವಿಪತ್ತು ನಿರ್ವಹಣಾ ಕಾಯ್ದೆ ಅಡಿಯಲ್ಲಿ ವಿದ್ಯಾರ್ಥಿಗಳ ಹಿತರಕ್ಷಣೆ ಆದ್ಯತೆ ನೀಡುವ ಸಲುವಾಗಿ ಮುಂಜಾಗ್ರತಾ ಕ್ರಮವಾಗಿ ರಜೆ ಘೋಷಣೆ ಮಾಡಲಾಗಿದೆ. ಭಟ್ಕಳ, ಹೊನ್ನಾವರ, ಕುಮಟಾ, ಅಂಕೋಲಾ, ಕಾರವಾರ, ಸಿರಸಿ,ಸಿದ್ದಾಪುರ , ದಾಂಡೇಲಿ, ಯಲ್ಲಾಪುರ ಹಾಗೂ ಜೋಯಿಡಾ, ಮುಂಡಗೋಡ ಹಾಗೂ ಹಳಿಯಾಳ ತಾಲೂಕಿನ ಎಲ್ಲಾ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜು, ಅನುದಾನಿತ, ಖಾಸಗಿ ಶಾಲೆಗಳ ವಿದ್ಯಾರ್ಥಿಗಳಿಗೆ ಮುಂಜಾಗ್ರತಾ ಕ್ರಮದ ಹಿನ್ನಲೆಯಲ್ಲಿ ರಜೆ ಘೋಷಣೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com