Breaking News

ಉ. ಕ ಜಿಲ್ಲೆಯಲ್ಲಿ ಅಂತರ ರಾಷ್ಟ್ರೀಯ ಪ್ರಜಾಪ್ರಭುತ್ವ ದಿನಕ್ಕೆ ಸಚಿವ ಮಂಕಾಳ ವೈದ್ಯ ಚಾಲನೆ

 

ಕಾರವಾರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ನಗರಾಭಿವೃಧ್ದಿ,ಅರಣ್ಯ ಜೀವ ಪರಿಸ್ಥಿತಿ ಮತ್ತು ಪರಿಸರ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉತ್ತರ ಕನ್ನಡ ಜಿಲ್ಲೆ ಮತ್ತು ವಿವಿಧ ಸಂಘಟನೆಗಳ ಸಹಭಾಗಿತ್ವದಲ್ಲಿ ಭಾನುವಾರ ಹೊನ್ನಾವರದಲ್ಲಿ ನಡೆದ ಅಂತರ ರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಮಾಂಕಾಳ ಎಸ್ ವೈದ್ಯ ಅವರು ಉದ್ಘಾಟನೆ ಮಾಡಿದರು.

ಅಂತರ ರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಜಿಲ್ಲೆಯ ಮಾವಿನಕೊಪ್ಪ ಚೆಕ್ ಪೋಸ್ಟ್‌ ನಿಂದ ಹಳಿಯಾಳ ತಾಲೂಕಿನಿಂದ, ಯಲ್ಲಾಪುರ ತಾಲೂಕು, ಸಿರಸಿ ತಾಲೂಕು,ಕುಮಟಾ ತಾಲೂಕು, ಹೊನ್ನಾವರ ತಾಲೂಕು ಹಾಗೂ ಭಟ್ಕಳ ತಾಲೂಕಿನ ಗೊರಟೆ ಗ್ರಾಮದ ಉಡುಪಿ ಜಿಲ್ಲೆಯ ಗಡಿಯವರೆಗೆ 143 ಕಿ. ಮೀ ಮಾನವ ಸರಪಳಿ ರಚಿಸಲಾಗಿತ್ತು.

  1.  

ಕಾರ್ಯಕ್ರಮದ ಅಂಗವಾಗಿ ಸಚಿವ ಮಂಕಾಳು ವೈದ್ಯ ಅವರು ಗಿಡ ನೆಡುವ ಕಾರ್ಯಕ್ರಮಕ್ಕೆ ಹಸಿರು ನಿಶಾನೆ ತೋರಿದರು. ಜಿಲ್ಲೆಯ ಕಲೆ, ಸಂಸ್ಕೃತಿ ಪ್ರದರ್ಶನ ಮಾಡಲಾಯಿತು.

ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ. ದೇಶಪಾಂಡೆ, ಡಿಸಿಸಿ ಅಧ್ಯಕ್ಷ ಸಾಯಿ ಗಾಂವಕರ್‌, ಡಿಸಿ ಲಕ್ಷ್ಮಿಪ್ರೀಯಾ, ಸಿಇಒ ಈಶ್ವರ್‌ ಕಾಂದೂ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಉಮೇಶ್‌ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com