Breaking News

ನಾಳೆಯಿಂದ ರಾಜ್ಯದಾದ್ಯಂತ ಶಾಲಾ ವಿದ್ಯಾರ್ಥಿಗಳಿಗೆ ದಸರಾ ರಜೆ

 

ಬೆಂಗಳೂರು: ಸಾರ್ವಜನಿಕ ಶಿಕ್ಷಣ ಇಲಾಖೆ ರಾಜ್ಯದಾದ್ಯಂತ ಶಾಲಾ ಮಕ್ಕಳಿಗೆ ಇದೇ 3 ರಿಂದ 20 ರವರೆಗೆ  ದಸರಾ ರಜೆ ಘೋಷಿಸಿದ್ದು, ಗುರುವಾರದಿಂದ ಮಕ್ಕಳಿಗೆ ದಸರಾ ರಜೆ ಆರಂಭವಾಗಲಿದೆ. ಒಟ್ಟು 17 ದಿನಗಳು ಶಾಲಾ ವಿದ್ಯಾರ್ಥಿಗಳಿಗೆ ದಸರಾ ರಜೆ ಇರಲಿದೆ.

  1.  

2024-25ನೇ ಶೈಕ್ಷಣಿಕ ಸಾಲಿನ ದಸರಾ ರಜೆ ಅಕ್ಟೋಬರ್ 3 ರಿಂದ 20 ರವರೆಗೆ ಇರಲಿದೆ. ಅಕ್ಟೋಬರ್ 2 ರಂದು ಗಾಂಧಿ ಜಯಂತಿ ಇದ್ದು, ಕಾರ್ಯಕ್ರಮದ ನಂತರ ರಜೆಗಳು ಆರಂಭ ಆಗಲಿದೆ.

ಇನ್ನೂ ದಸರಾ ರಜೆಯ ಬಳಿಕ ಅ. 21 ರಿಂದ 2 ನೇ ಅವಧಿಯು ಪ್ರಾರಂಭವಾಗಲಿದ್ದು, 2025 ರ ಏಪ್ರಿಲ್ 10ರವರಿಗೆ ಶಾಲೆ ನಡೆಯಲಿದೆ. 2024- 2025ರ ಶೈಕ್ಷಣಿಕ ವರ್ಷದ ಶಾಲಾ ಅವಧಿ ಮಾರ್ಗದರ್ಶಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ, ಶಾಲೆಗಳು ಆರಂಭಕ್ಕೂ ಮುನ್ನ ಪ್ರಕಟಣೆ ಹೊರಡಿಸಿತ್ತು. ಇದರ ನಿಯಮಾನುಸಾರದಂತೆ ರಜೆಗಳು ಘೋಷಣೆ ಆಗಿದೆ ಎಂದು ಪ್ರಕಟಣೆ ತಿಳಿಸಿದೆ.

  1.  

Leave a Reply

Your email address will not be published. Required fields are marked *