Breaking News

ಮಾಜಿ ಶಾಸಕ ಮೊಯಿದ್ದೀನ್ ಬಾವಾ ಸಹೋದರ ಮುಮ್ತಾಜ್ ಅಲಿ ನಾಪತ್ತೆ, ಕಾರು ಪತ್ತೆ, ಶೋಧ ಕಾರ್ಯ

 

ಮಂಗಳೂರು: ಮಾಜಿ ಶಾಸಕ ಮೊಯಿದ್ದೀನ್ ಬಾವಾ ಅವರ ಸಹೋದರ ಮುಮ್ತಾಜ್ ಅಲಿ (52) ಅವರು ನಾಪತ್ತೆ ಆಗಿದ್ದು, ಅವರ ಕಾರು ಕೂಳೂರಿನ ಸೇತುವೆ ಪಕ್ಕದಲ್ಲಿ ಪತ್ತೆ ಆಗಿದ್ದು, ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.

  1.  

ತಡರಾತ್ರಿ 3 ಗಂಟೆ ಸುಮಾರಿಗೆ ಮುಮ್ತಾಜ್ ಅಲಿ ಅವರು ಮನೆಯಿಂದ ಬಿಎಂಡಬ್ಲ್ಯು ಕಾರಿನಲ್ಲಿ ತೆರಳಿದ್ದರು.  ಭಾನುವಾರ ಬೆಳಿಗ್ಗೆ ಬೆಳಗ್ಗೆ 5 ಗಂಟೆಗೆ ಕೂಳೂರು ಸೇತುವೆ ಪಕ್ಕದಲ್ಲಿಯೇ ಕಾರು ಪತ್ತೆ ಆಗಿದೆ. ಆದರೆ, ಅವರು ಮಾತ್ರ ಕಾಣೆಯಾಗಿದ್ದಾರೆ.  ಅವರ ಮೊಬೈಲ್ ಕೂಡ ಸ್ವೀಚ್ಡ್ ಆಫ್ ಆಗಿದೆ. ಪುತ್ರಿಗೆ ಈ ವಿಚಾರ ತಿಳಿದು ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮುಮ್ತಾಜ್ ಅಲಿ ಅವರು ಸೇತುವೆಯಿಂದ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದ್ದು, ಎಸ್‌ಡಿಆರ್‌ಎಫ್, ಎನ್‌ಡಿಆರ್‌ಎಫ್, ಅಗ್ನಿಶಾಮಕದಳ ನದಿಯಲ್ಲಿ ಶೋಧ ಕಾರ್ಯ ನಡೆಸುತ್ತಿದೆ. ಎಫ್ಎಸ್‌ಎಲ್ ಅಧಿಕಾರಿಗಳು ಕೂಡ ಶೋಧ ಕಾರ್ಯ ನಡೆಸುತ್ತಿದ್ದಾರೆ.

ಸ್ಥಳಕ್ಕೆ ಮಾಜಿ ಶಾಸಕ ಮೊಯಿದ್ದೀನ್ ಬಾವಾ ಸೇರಿದಂತೆ ಕುಟುಂಬಸ್ಥರು ಸ್ಥಳಕ್ಕೆ ಭೇಟಿ ನೀಡಿದ್ದಾರೆ‌. ಸ್ಥಳಕ್ಕೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗ್ರವಾಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಮ್ತಾಜ್ ಅಲಿ ಅವರು ವಿವಿಧ ಉದ್ಯಮ ಮತ್ತು ಮಸೀದಿ ಕಮಿಟಿಗಳಲ್ಲಿ ತೊಡಗಿಸಿಕೊಂಡಿದ್ದರು.

  1.  

Leave a Reply

Your email address will not be published. Required fields are marked *