Breaking News

ಮಂಗಳೂರು: ಖಾಸಗಿ ಬಸ್ ನಿರ್ವಾಹಕನ ಮೃತ ದೇಹ ಪತ್ತೆ, ಕೊಲೆಯ ಶಂಕೆ

 

ಮಂಗಳೂರು:  ಇಲ್ಲಿನ ಸ್ಟೇಟ್‌ ಬ್ಯಾಂಕ್ ಬಳಿ ಇರುವ ಇಂದಿರಾ ಕ್ಯಾಂಟೀನ್ ಸಮೀಪದಲ್ಲಿ ಖಾಸಗಿ ಬಸ್ ನಿರ್ವಾಹಕನ ಮೃತದೇಹ ಕೊಲೆ ಮಾಡಿರುವ ಸ್ಥಿತಿಯಲ್ಲಿ ಸೋಮವಾರ ಪತ್ತೆ ಆಗಿರುವ ಘಟನೆ ನಡೆದಿದೆ.

ಮಂಗಳೂರು-ವಿಟ್ಲ ನಡುವೆ ಸಂಚರಿಸುವ ಖಾಸಗಿ ಬಸ್‌ನಲ್ಲಿ ನಿರ್ವಾಹಕರಾಗಿದ್ದ ರಾಜೇಶ್ (30) ಮೃತಪಟ್ಟಿರುವ ವ್ಯಕ್ತಿ.  ಬೇರೆ ಯಾವುದೇ ವಿಚಾರಕ್ಕೆ ಗಲಾಟೆ ನಡೆದಿದ್ದು, ಪ್ರತಿರೋಧ ಒಡ್ಡಿರುವುದಕ್ಕೆ ದುಷ್ಕರ್ಮಿಗಳು ಕಲ್ಲು ಎತ್ತಿ ಹಾಕಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಮೃತ ದೇಹವನ್ನು ವೆನ್‌ಲಾಕ್ ಶವಾಗಾರದಲ್ಲಿ ಇಡಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಪಾಂಡೇಶ್ವರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

  1.  

Leave a Reply

Your email address will not be published. Required fields are marked *