ರಾಜ್ಯದ ಹಲವಡೆ ಆಲಿಕಲ್ಲು ಮಳೆ, ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಸಿಂಚನ ಸಾಧ್ಯತೆ, ಹವಾಮಾನ ಇಲಾಖೆಯ ಪ್ರಕಟಣೆ

ಮಳೆ

ಬೆಂಗಳೂರು: ರಾಜ್ಯದ ಹಲವು ಕಡೆಗಳಲ್ಲಿ ಮಳೆರಾಯ ಸುರಿಯಲಿದೆ ಎಂದು ಹವಾಮಾನ ಇಲಾಖೆಯ ಮುನ್ಸೂಚನೆ ನೀಡಿದ್ದು, ಉತ್ತರ ಕರ್ನಾಟಕದ ಕಲಬುರಗಿ ವಿಜಯಪುರ, ಬಾಗಲಕೋಟೆ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆ ಬೀಳುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದ್ದು, ಬೀದರ್, ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಇರಲಿದ್ದು, ಮುಂಜಾಗ್ರತೆ ವಹಿಸುವಂತೆ ಪ್ರಕಟಣೆ ತಿಳಿಸಿದೆ.
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಸೇರಿದಂತೆ ಮಲೆನಾಡಿನ ಶಿವಮೊಗ್ಗ, ಕೊಡಗು, ಹಾಸನ ಭಾಗಗಳಲ್ಲೂ ಗುಡುಗು ಸಹಿತ ಮಳೆ ಸುರಿಯಲಿದೆ. ಉತ್ತರ ಒಳನಾಡಿನ ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಲ್ಲೂ ಮಳೆ ಸುರಿವ ಸಂಭವವಿದ್ದು, ಉಳಿದ ಕೆಲವು ಜಿಲ್ಲೆಗಳಲ್ಲಿ ಬಿಸಿಲಿನ ಸೆಖೆ ಮುಂದುವರೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

📢 To advertise on this website please call +91 99808 75054    |    ಸುದ್ದಿ ಹಾಗೂ ಜಾಹೀರಾತು ನೀಡಲು ಸಂಪರ್ಕಿಸಿ +91 99808 75054

Leave a Reply

Your email address will not be published. Required fields are marked *

© 2022–2026 Karavali Daily News. All Rights Reserved | Powered by webbrahma