ಕಾರ್ಕಳ: ಅಜೆಕಾರ್ ಪದ್ಮಗೋಪಾಲ್ ಎಜುಕೇಷನ್ ಟ್ರಸ್ಟ್ ಆಡಳಿತಕ್ಕೆ ಒಳಪಟ್ಟ ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ ಟ್ರಸ್ಟಿನ ಸಮಾಜಮುಖಿ ಕಾರ್ಯಕ್ರಮದ ಭಾಗವಾಗಿ ಹಲವು ವರ್ಷಗಳಿಂದ ಕಾರ್ಕಳ ತಾಲೂಕಿನ ಬಡ ಅರ್ಹ ಮಕ್ಕಳಿಗೆ ಉಚಿತ ಶಿಕ್ಷಣ ನೀಡಲಾಗುತ್ತಿದ್ದು ಅರ್ಜಿ ಆಹ್ವಾನಿಸಲಾಗುತ್ತದೆ ಎಂದು ಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷ ಸುಧಾಕರ ಶೆಟ್ಟಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಶೈಕ್ಷಣಿಕ ಸಾಲಿನಲ್ಲಿ ಕಾರ್ಕಳ ಜ್ಞಾನಸುಧಾ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆಯಲ್ಲಿ 6 ರಿಂದ 10 ನೇ ತರಗತಿಯವರೆಗೆ ಪ್ರತೀ ತರಗತಿಗೆ 5 ವಿದ್ಯಾರ್ಥಿಗಳಂತೆ ಉಚಿತ ಶಿಕ್ಷಣವನ್ನು ಮತ್ತು ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗಕ್ಕೆ ದಾಖಲಾತಿ ಬಯಸುವ ಎಸ್ಸೆಸ್ಸೆಲ್ಸಿಯಲ್ಲಿ ಶೇ 95 ಕ್ಕಿಂತ ಅಧಿಕ ಅಂಕ ಗಳಿಸುವ ವಿದ್ಯಾರ್ಥಿಗಳಿಗೆ ಕಾಲೇಜು ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ಸಂಪೂರ್ಣ ಉಚಿತ ಶಿಕ್ಷಣ, ಶೇ 90 ಕ್ಕಿಂತ ಅಧಿಕ ಅಂಕ ಗಳಿಸುವ ವಿದ್ಯಾರ್ಥಿಗಳಿಗೆ ಕಾಲೇಜು ಶುಲ್ಕದಲ್ಲಿ ಸಂಪೂರ್ಣ ವಿನಾಯಿತಿ, ಶೇ 85 ಕ್ಕಿಂತ ಅಧಿಕ ಅಂಕ ಗಳಿಸುವ ವಿದ್ಯಾರ್ಥಿಗಳಿಗೆ ಶೇ 25 ರಷ್ಟು ಕಾಲೇಜು ಶುಲ್ಕದಲ್ಲಿ ವಿನಾಯಿತಿ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಆಸಕ್ತ ವಿದ್ಯಾರ್ಥಿಗಳು ಮತ್ತು ಪೋಷಕರು ಸಂಸ್ಥೆಯ ಕಚೇರಿಯನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಶಾಲಾ ಕಚೇರಿಯ ಮೊಬೈಲ್ 8147454907, ಕಾಲೇಜು ಕಚೇರಿ ಮೊಬೈಲ್ 8147454906, 7259500911 ಸಂಖ್ಯೆ ಸಂಪರ್ಕ ಮಾಡುವಂತೆ ತಿಳಿಸಿದ್ದಾರೆ.





