ಏಕಾಏಕಿ ಕುಸಿದು ಬಿದ್ದ ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ ಹೆಗ್ಡೆ, ಸ್ಪೀಕರ್ ಖಾದರ್ ಕಾರಿನಲ್ಲಿ ಆಸ್ಪತ್ರೆಗೆ ದಾಖಲು

Spread the love

ಬೆಂಗಳೂರು: ಕೊಂಡಜ್ಜಿ ಬಸಪ್ಪ ಸ್ಮರಣಾರ್ಥ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವೇಳೆ ನಿವೃತ್ತ ನ್ಯಾ. ಮಾಜಿ ಲೋಕಾಯುಕ್ತ ಸಂತೋಷ್ ಹೆಗ್ಡೆ  ಅವರ ಆರೋಗ್ಯದಲ್ಲಿ ಏರುಪೇರು ಆಗಿದ್ದು, ಅವರು ಅಸ್ವಸ್ಥಗೊಂಡು ಕುಸಿದು ಬಿದ್ದ ಘಟನೆ ಶುಕ್ರವಾರ ನಡೆದಿದೆ.

ಸಂತೋಷ ಹೆಗ್ಡೆ ಅವರು ಏಕಾಏಕಿ ವಾಂತಿ ಕಾಣಿಸಿಕೊಂಡ ಪರಿಣಾಮ ಅವರು ಕುಸಿದು ಬಿದ್ದರು. ಈ ವೇಳೆ ತಕ್ಷಣವೇ ಅಂಬುಲೆನ್ಸ್ ಲಭ್ಯವಿರದ ಹಿನ್ನೆಲೆ, ವಿಧಾನಸಭಾ ಸ್ಪೀಕರ್ ಯು. ಟಿ. ಖಾದರ್ ತಮ್ಮದೇ ಕಾರಿನಲ್ಲಿ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿದರು.
ಮಧುಮೇಹದಿಂದ ಬಳಲುತ್ತಿರುವ ಅವರು, ಸಕ್ಕರೆ ಅಂಶ ಕಡಿಮೆ ಆಗಿರುವ ಕಾರಣದಿಂದ ಅವರು ಅಸ್ವಸ್ಥಗೊಂಡಿದ್ದು, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಸ್ಪೀಕರ್ ಯು.ಟಿ. ಖಾದರ್ ಅವರು ಮಾತನಾಡಿ, ಸಂತೋಷ್ ಹೆಗ್ಡೆ ಅವರಿಗೆ ತಕ್ಷಣವೇ ಚಿಕಿತ್ಸೆಗೆ ದಾಖಲಿಸಲಾಗಿದ್ದು, ಯಾವುದೇ ಆತಂಕದ ಅಗತ್ಯ ಇಲ್ಲ. ಅವರು ಆಸ್ಪತ್ರೆಯಲ್ಲಿ ಆರಾಮ ಆಗಿದ್ದಾರೆ ಎಂದು ತಿಳಿಸಿದ್ದಾರೆ.

ಸಂತೋಷ್ ಹೆಗ್ಡೆ ಅವರ ಕುಟುಂಬ ಸದಸ್ಯರು ಆಸ್ಪತ್ರೆಗೆ ಆಗಮಿಸಿದ್ದಾರೆ.

📢 To advertise on this website please call +91 99808 75054    |    ಸುದ್ದಿ ಹಾಗೂ ಜಾಹೀರಾತು ನೀಡಲು ಸಂಪರ್ಕಿಸಿ +91 99808 75054

Leave a Reply

Your email address will not be published. Required fields are marked *