ಬೆಂಗಳೂರು: ರಾಜ್ಯದ ಇಬ್ಬರು ಐಎಎಸ್ ಅಧಿಕಾರಗಳ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದ್ದು, ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಕಾರ್ಯ ನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ಅವರ ವರ್ಗಾವಣೆಗೆ ತೀವ್ರ ವಿರೋಧ ವ್ಯಕ್ತ ಆಗಿದೆ.
ತಾಂತ್ರಿಕ ಶಿಕ್ಷಣದ ನಿರ್ದೇಶಕರಾಗಿದ್ದ ಎಚ್. ಪ್ರಸನ್ನ ಅವರನ್ನು ತಕ್ಷಣವೇ ಜಾರಿಗೆ ಬರುವಂತೆ ಕೃಷಿ ಮಾರುಕಟ್ಟೆ ಇಲಾಖೆ ನಿರ್ದೇಶಕ ಹುದ್ದೆಗೆ ವರ್ಗಾವಣೆ ಐಎಎಸ್ ಅಧಿಕಾರಿ ಶಿವಾನಂದ ಕಪಾಶಿ ಅವರಿಗಿದ್ದ ಕೃಷಿ ಮಾರುಕಟ್ಟೆ ಇಲಾಖೆಯ ನಿರ್ದೇಶಕ ಹುದ್ದೆಯ ಹೆಚ್ಚುವರಿ ಜವಾಬ್ದಾರಿಯಿಂದ ತೆರವು ಮಾಡಿ ಸರಕಾರ ಆದೇಶ ಹೊರಡಿಸಿದೆ.





