ಬೆಂಗಳೂರು: ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ದಾಖಲೆಯ ಫಲಿತಾಂಶ ಹೊರಬಂದಿದ್ದು, ಕಳೆದ ಬಾರಿಗೆ ಹೋಲಿಸಿದರೆ ಶೇ 13 ರಷ್ಟು ಫಲಿತಾಂಶ ಹೆಚ್ಚಳ ಆಗಿದೆ. ರಾಜ್ಯಕ್ಕೆ ಉಡುಪಿ ಮೊದಲ ಸ್ಥಾನ, ದ.ಕ ಎರಡನೇ ಸ್ಥಾನ ಪಡೆದುಕೊಂಡಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ತಿಳಿಸಿದರು.

2026 ರ ಪರೀಕ್ಷೆಯಲ್ಲಿ ಕಲಾ ವಿಭಾಗದಲ್ಲಿ ಶೇಕಡಾ 71, ವಾಣಿಜ್ಯ ವಿಭಾಗದಲ್ಲಿ ಶೇಕಡಾ 88, ವಿಜ್ಞಾನ ವಿಭಾಗದಲ್ಲಿ ಶೇಕಡಾ 92 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕಳೆದ ಬಾರಿಗೆ ಹೋಲಿಸಿದರೆ ಗ್ರಾಮೀಣ ಭಾಗದಲ್ಲಿ ಫಲಿತಾಂಶ ಶೇ 19 ರಷ್ಟು ಹೆಚ್ಚಳವಾಗಿದೆ. ಉತ್ತೀರ್ಣರಾದ 5,46,698 ಮಂದಿ ಪೈಕಿ 1,70,529 ವಿದ್ಯಾರ್ಥಿಗಳು ಶೇ 85 ಕ್ಕಿಂತ ಹೆಚ್ಚು ಅಂಕ ಪಡೆದು ಉನ್ನತ ಶ್ರೇಣಿ ಪಡೆದುಕೊಂಡಿದ್ದಾರೆ. ಮೊದಲ ಸ್ಥಾನ 2,95,385 ಪಡೆದುಕೊಂಡಿದ್ದು, ದ್ವಿತೀಯ ದರ್ಜೆಯಲ್ಲಿ 63,957 ಹಾಗೂ 16,827 ಮಂದಿ ಉತ್ತೀರ್ಣರಾಗಿದ್ದಾರೆ ಎಂದರು.





