ಅಂಕೋಲಾ: ಟ್ಯಾಂಕರ್ ಗೆ ಬೆಂಕಿ, ಹೊತ್ತಿ ಉರಿದ ವಾಹನ, ಬೆಂಕಿ ನಂದಿಸಲು ಹರಸಾಹಸ

Spread the love

ಅಂಕೋಲಾ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲ್ಲೂಕಿನ ಕಂಚಿನಬಾಗಿಲು ಸಮೀಪ ರಾಷ್ಟ್ರೀಯ ಹೆದ್ದಾರಿ 52 ರಲ್ಲಿ ರಾಸಾಯನಿಕ ಸಾಗಣೆ ಮಾಡುತ್ತಿದ್ದ ಟ್ಯಾಂಕರ್‌ ಸ್ಫೋಟಗೊಂಡ ಪರಿಣಾಮ ಬೆಂಕಿ ಹೊತ್ತಿ ಉರಿದ ಘಟನೆ ನಡೆದಿದೆ. ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ ಎಂದು ತಿಳಿದು ಬಂದಿದೆ.

ಸ್ಫೋಟದ ತೀವ್ರತೆಯಿಂದ ಟ್ಯಾಂಕರ್ ಹೊತ್ತಿ ಉರಿದಿದೆ. ಬೆಂಕಿ ತೀವ್ರತೆಯಿಂದಾಗಿ ಆತಂಕದ ಪರಿಸ್ಥಿತಿ ನಿರ್ಮಾಣ ಆಯಿತು. ಈ ಅವಘಡದ ಹಿನ್ನೆಲೆ ಅಂಕೋಲಾದಿಂದ ಹುಬ್ಬಳ್ಳಿ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 52 ರಲ್ಲಿ ವಾಹನ ಸಂಚಾರವನ್ನು ಸಂಪೂರ್ಣವಾಗಿ ಬಂದ್ ಮಾಡಲಾಗಿತ್ತು. ಅಪಘಾತದಲ್ಲಿ ಗಾಯಗೊಂಡ ಚಾಲಕ ದಾವಣಗೆರೆ ಮೂಲದ ವ್ಯಕ್ತಿ ಎಂದು ಗೊತ್ತಾಗಿದೆ. ಕಾರವಾರ ಕ್ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಹೆಚ್ಚಿನ ಚಿಕಿತ್ಸೆ ಅಗತ್ಯ ಇದೆ ಎಂದು ತಿಳಿದು ಬಂದಿದೆ.

ಘಟನೆ ಸುದ್ದಿ ತಿಳಿಯುತ್ತಿದ್ದಂತೆ ಅಂಕೋಲಾ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬಂದು ಬೆಂಕಿ ನಂದಿಸಲು ಕಾರ್ಯಾಚರಣೆ ನಡೆಸಿದರು. ಬೆಂಕಿ ನಂದಿಸಲು ಪರದಾಟ ನಡೆಸಬೇಕಾಯಿತು.

📢 To advertise on this website please call +91 99808 75054    |    ಸುದ್ದಿ ಹಾಗೂ ಜಾಹೀರಾತು ನೀಡಲು ಸಂಪರ್ಕಿಸಿ +91 99808 75054

Leave a Reply

Your email address will not be published. Required fields are marked *

© 2022–2026 Karavali Daily News. All Rights Reserved | Powered by webbrahma