ಮಂಗಳೂರು: ಸೌಜನ್ಯ ಪರ ಹೋರಾಟಗಾರ ಬೆಳ್ತಂಗಡಿ ತಾಲ್ಲೂಕಿನ ಉಜಿರೆ ಮಹೇಶ್ ಶೆಟ್ಟಿ ತಿಮರೋಡಿ ಅವರ ವಿರುದ್ಧ 32 ಪ್ರಕರಣಗಳು ವಿವಿಧ ಠಾಣೆಗಳಲ್ಲಿ ದಾಖಲಾಗಿರುವ ಹಿನ್ನಲೆಯಲ್ಲಿ ಬೆಳ್ತಂಗಡಿ ಪೊಲೀಸರು ಸಲ್ಲಿಸಿದ ಅರ್ಜಿಯನ್ನು ಪುರಸ್ಕರಿಸಿ ಪುತ್ತೂರು ಉಪ ವಿಭಾಗಾಧಿಕಾರಿ ಸ್ಟೆಲ್ಲಾ ವರ್ಗೀಸ್ ಅವರು ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಗಡೀಪಾರು ಮಾಡಿ ಆದೇಶ ಹೊರಡಿಸಿದ್ದಾರೆ.
ಬೆಳ್ತಂಗಡಿ ಪೊಲೀಸರು ಪ್ರಕರಣದ ಕುರಿತು ಸಲ್ಲಿಸಿದ್ದ ವರದಿಯನ್ನು ಪರಿಶೀಲನೆ ನಡೆಸಿ ವರದಿ ಆಧಾರದಲ್ಲಿ ಸೆ.18 ರಂದು ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿಗೆ ವರ್ಷದ ಕಾಲ ಗಡೀಪಾರು ಆದೇಶ ಮಾಡಿರುವುದಾಗಿ ತಿಳಿದು ಬಂದಿದೆ.
ಗಡೀಪಾರು ಮಾಡಿದ ಆದೇಶದ ಪ್ರತಿ ಬಂಟ್ವಾಳ ಉಪ ವಿಭಾಗದ ಡಿವೈಎಸ್ಪಿಗೆ ಬಂದ ಬಳಿಕ ಗಡೀಪಾರು ಮಾಡುವ ಕಾನೂನು ಕ್ರಮ ಕೈಗೊಳ್ಳಲಿದ್ದಾರೆ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.