ಶಿವಮೊಗ್ಗ: ಇಲ್ಲಿನ ತಹಶೀಲ್ದಾರ್ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದರು. ದುರಾಡಳಿತ, ಲಂಚಕ್ಕೆ ಬೇಡಿಕೆ, ವಿನಾಕಾರಣ ಸಾರ್ವಜನಿಕರನ್ನು ಕಚೇರಿಗೆ ಅಲೆಸುವ ಆರೋಪಗಳ ಹಿನ್ನೆಲೆಯಲ್ಲಿ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ಅವರ ಸೂಚನೆ ಮೇರೆಗೆ ಲೋಕಾಯುಕ್ತ ಪೊಲೀಸರು, ಪರಿಶೀಲನೆ ನಡೆಸಿದರು.
ದಾವಣಗೆರೆ, ಚಿತ್ರದುರ್ಗದಿಂದ ಬಂದಿದ್ದ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳ ನಾಲ್ಕು ತಂಡ ಹಾಗೂ ಶಿವಮೊಗ್ಗ ಲೋಕಾಯುಕ್ತ ಕಚೇರಿ ಅಧಿಕಾರಿಗಳನ್ನೊಳಗೊಂಡ ನಾಲ್ಕು ತಂಡ ಕಾರ್ಯಾಚರಣೆಯಲ್ಲಿ ಭಾಗಿ ಆಗಿತ್ತು.
ಸಿಂಧುತ್ವ ಪ್ರಮಾಣ ಪತ್ರ, ಮೈನಾರಿಟಿ, ಸಾಲ್ವೆನ್ಸಿ ಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರ ಪಡೆಯಲು ಸಲ್ಲಿಕೆಯಾದ ಅರ್ಜಿಗಳು ಅದರಲ್ಲಿ ನಿಗದಿತ ಕಾಲ ಮಿತಿಯಲ್ಲಿ ಎಷ್ಟು ವಿಲೇವಾರಿ ಆಗಿವೆ. ಎಷ್ಟು ಬಾಕಿ ಉಳಿದಿವೆ ಎಂಬುದನ್ನು ಪರಿಶೀಲಿಸಿದರು. ಲೋಕಾಯುಕ್ತ ಎಸ್ಪಿ ಮಂಜುನಾಥ ಚೌಧರಿ, ಡಿವೈಎಸ್ಪಿ ಬಿ.ಪಿ.ಚಂದ್ರಶೇಖರ್ ಅವರ ನೇತೃತ್ವದಲ್ಲಿ ತಂಡಗಳಿಂದ ಮೇಲ್ವಿಚಾರಣೆ ನಡೆಸಲಾಯಿತು.