ಕಾರವಾರ: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ರಾಜ್ಯದ ಜನರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಬಗ್ಗೆ ಮಾಹಿತಿ ಸಂಗ್ರಹಿಸಲು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸಲಾಗುತ್ತಿದೆ. ಸಮೀಕ್ಷೆ ಕಾರ್ಯವೈಖರಿಯನ್ನು ಖುದ್ದು ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಅವರು ಮನೆಗಳಿಗೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು.
ಈ ಸಮೀಕ್ಷೆ ಅ. 7 ರವರೆಗೆ ನಿಗದಿ ಪಡಿಸಲಾಗಿದ್ದು, ಜಿಲ್ಲೆಯಲ್ಲಿ ಸಮೀಕ್ಷೆ ಕಾರ್ಯವು ಪ್ರಗತಿಯಲ್ಲಿದ್ದು, ಸಮೀಕ್ಷೆ ಸಂದರ್ಭದಲ್ಲಿ ಗಣತಿದಾರರು ಮನೆ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಲಿದ್ದಾರೆ.
ಸಮೀಕ್ಷೆಗೆ ದಾಖಲೆಗಳ ಅವಶ್ಯಕತೆ ಇರುವುದರಿಂದ ಎಲ್ಲ ಸಾರ್ವಜನಿಕರು ತಮ್ಮ ಕುಟುಂಬದ ಸದಸ್ಯರ ರೇಷನ್ ಕಾರ್ಡ್,ಆಧಾರ್ ಕಾರ್ಡ್ ಮತದಾರರ ಗುರುತಿನ ಚೀಟಿ, ವಿಕಲಚೇತರನರಾಗಿದ್ದರೆ ಯುಐಡಿ ಕಾರ್ಡ್ ಅಥವಾ ಅಂಗವಿಕಲ ಪ್ರಮಾಣ ಪತ್ರದ ದಾಖಲೆಗಳನ್ನು ಇಟ್ಟುಕೊಂಡು ಸಮೀಕ್ಷೆಗೆ ಸಹಕರಿಸುವಂತೆ
ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ತಿಳಿಸಿದ್ದಾರೆ.