ಮಂಗಳೂರು: ನಾರಿ ಶಕ್ತಿ ವಂದನಾ ಹೆಸರಿನಲ್ಲಿ ಮಹಿಳಾ ಮೀಸಲಾತಿ ವಿಧೇಯಕ್ಕೆ ಸೋಲು ಆಗಿರುವುದನ್ನು ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರಕಾರವು ವಿನಾಕಾರಣ ಕಾಂಗ್ರೆಸ್ ವಿರುದ್ಧ ಅಪಪ್ರಚಾರ ಮಾಡುವ ಕೆಲಸ ಮಾಡುತ್ತಿದೆ. ಬಿಜೆಪಿ ಎಂದಿಗೂ ಕೂಡ ಮಹಿಳಾ ಪರವಾಗಿಲ್ಲ ಎಂದು ಕರ್ನಾಟಕ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಡಳಿ ಅಧ್ಯಕ್ಷೆ ಶಾಲೆಟ್ ಪಿಂಟೋ ಅವರು ಸೋಮವಾರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.
ಕಾಂಗ್ರೆಸ್ ಸರಕಾರ ಮಹಿಳೆಯರ ಘನತೆ ಎತ್ತಿ ಹಿಡಿಯುವ ಕೆಲಸ ಮಾಡುತ್ತಿದೆ. ರಾಜ್ಯದಲ್ಲಿ ಹಲವಾರು ಯೋಜನೆಗಳ ಮೂಲಕ ಮಹಿಳೆಯರಿಗೆ ಗೌರವ ನೀಡಲಾಗಿದೆ. ಮಹಿಳಾ ಮೀಸಲಾತಿ ಎಂಬ ರಾಜಕೀಯ ಸ್ವಾತಂತ್ರ್ಯಕ್ಕೆ ಕ್ಷೇತ್ರ ವಿಂಗಡನೆ, ಗಣತಿ ಎಂಬ ಸಂಕೋಲೆ ಹಾಕಿ ಕಟ್ಟಿ ಹಾಕುವ ಪ್ರಯತ್ನ ಮಾಡಲಾಗಿದೆ. ಕಾಂಗ್ರೆಸ್ 1989 ರಿಂದಲೂ ಮಹಿಳಾ ಮೀಸಲಾತಿಗೆ ಪ್ರಯತ್ನಿಸುತ್ತಾ ಬಂದಿದೆ. ಇದೀಗ ಸ್ಪಷ್ಟ ಬಹುಮತದೊಂದಿಗೆ ಸರಕಾರ ಹೊಂದಿರುವ ಬಿಜೆಪಿ 2023 ರಲ್ಲಿ ಅಂಗೀಕಾರ ಆಗಿರುವ ಶೇ. 33 ರ ಮಹಿಳಾ ಮೀಸಲಾತಿಯನ್ನು ಮುಂದಿನ ಚುನಾವಣೆಯಲ್ಲಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.
ಮುಖಂಡರಾದ ನಮಿತಾ ಡಿ ರಾವ್, ಗೀತಾ ಅತ್ತಾವರ, ಸುರೇಖಾ ಚಂದ್ರಹಾಸ್, ಚಂದ್ರಕಲಾ ಜೋಗಿ, ರೂಪ, ಸಾರಿಕಾ, ಉಷಾ ಅಂಚನ್ ಇದ್ದರು.





