23 ರಂದು ಕವಿವಿ 75 ನೇ ವಾರ್ಷಿಕ ಘಟಿಕೋತ್ಸವ, ರಾಜ್ಯಪಾಲ ಗೆಹಲೋತ್ ಅಧ್ಯಕ್ಷತೆ: ಕುಲಪತಿ ಪ್ರೊ. ಎ. ಎಂ. ಖಾನ್

ಖಾನ್

ಧಾರವಾಡ: ಕರ್ನಾಟಕ ವಿಶ್ವವಿದ್ಯಾಲಯದ 75 ನೇ ವಾರ್ಷಿಕ ಘಟಿಕೋತ್ಸವವು 23 ರಂದು ಬೆಳಿಗ್ಗೆ 11 ಗಂಟೆಗೆ ಗಾಂಧಿ ಭವನದಲ್ಲಿ ನಡೆಯಲಿದೆ ಎಂದು ‌ಕವಿವಿ ‌ಕುಲಪತಿ ಪ್ರೊ.ಎ.ಎಂ. ಖಾನ್ ಅವರು ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದರು.

75ನೇ ವಾರ್ಷಿಕ ಘಟಿಕೋತ್ಸವದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಅವರು ಘಟಿಕೋತ್ಸವದ ಅಧ್ಯಕ್ಷತೆ ವಹಿಸಲಿದ್ದಾರೆ. ಇಸ್ರೋ ನಿಕಟಪೂರ್ವ ಅಧ್ಯಕ್ಷ ಪ್ರೊ. ಎ.ಎಸ್. ಕಿರಣಕುಮಾರ ಘಟಿಕೋತ್ಸವದ ಭಾಷಣ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ ಎಂದರು

ಘಟಿಕೋತ್ಸವದಲ್ಲಿ 270 ಪ್ರಶಸ್ತಿಗಳನ್ನು ಮಾಡಲಾಗುವದು. 113 ವಿದ್ಯಾರ್ಥಿಗಳು ಉಪಸ್ಥಿತಿಯಲ್ಲಿ ಸುವರ್ಣ ಪದಕ ಪಡೆಯಲಿದ್ದಾರೆ. 57 ವಿದ್ಯಾರ್ಥಿಗಳು ಪಾರಿತೋಷಕ ಪಡೆಯಲಿದ್ದಾರೆ. 78 ವಿದ್ಯಾರ್ಥಿಗಳು ಶಿಷ್ಯವೇತನ ಪಡೆಯಲಿದ್ದಾರೆ. ಇನ್ನೂ 96 ವಿದ್ಯಾರ್ಥಿಗಳು ರ‍್ಯಾಂಕ್‌ಗಳನ್ನು ಪಡೆಯಲಿದ್ದಾರೆ ಎಂದರು.

ಕಲೆ. ವಾಣಿಜ್ಯ, ಸಮಾಜ ವಿಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ, ಕಾನೂನು ಮತ್ತು ನಿರ್ವಹಣೆ, ಶಿಕ್ಷಣ ವಿಭಾಗದ 252 ಅಭ್ಯರ್ಥಿಗಳು ಪಿ.ಎಚ್.ಡಿ ಪದವಿ ಪಡೆಯಲಿದ್ದು, ಅದರಲ್ಲಿ 172 ಪುರಷರು ಮತ್ತು 80 ಮಹಿಳೆಯರಿದ್ದಾರೆ. ಸ್ನಾತಕೋತ್ತರದ ಕಲೆ. ವಾಣಿಜ್ಯ, ಸಮಾಜ ವಿಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ, ಕಾನೂನು ಮತ್ತು ನಿರ್ವಹಣೆ, ಶಿಕ್ಷಣ ಮತ್ತು ದೈಹಿಕ ಶಿಕ್ಷಣ,ವಿಷಯಗಳ ಒಟ್ಟು 4129 ಮಂದಿ ವಿದ್ಯಾರ್ಥಿಗಳು ಪದವಿ ಪಡೆಯಲಿದ್ದಾರೆ ಎಂದರು.

ಪದವಿ ವಿವಿಧ ವಿಷಯಗಳಲ್ಲಿ ಒಟ್ಟು 24,030 ಮಂದಿ ವಿದ್ಯಾರ್ಥಿಗಳು ಘಟಿಕೋತ್ಸವದಲ್ಲಿ ಪದವಿ ಪಡೆಯಲಿದ್ದಾರೆ. ವಿವಿಧ ವಿಷಯಗಳಲ್ಲಿ ಒಟ್ಟು 69 ಮಂದಿ ವಿದ್ಯಾರ್ಥಿಗಳು ಸ್ನಾತಕೋತ್ತರ ಡಿಪ್ಲೋಮಾ ಪದವಿ ಪಡೆಯಲಿದ್ದಾರೆ. ಘಟಿಕೋತ್ಸವದಲ್ಲಿ 104 ಜನರಿಗೆ ಗೌರವ ಡಾಕ್ಟರೇಟ್ ನೀಡಲಾಗಿದೆ. ಕವಿವಿ ಲಕ್ಷಾಂತರ ವಿದ್ಯಾರ್ಥಿಗಳ ಬೃಹತ್ ಸಂಖ್ಯೆಯ ಹಳೆಯ ವಿದ್ಯಾರ್ಥಿಗಳ‌ ಸಂಖ್ಯೆ ಹೊಂದಿದೆ ಎಂದರು.

📢 To advertise on this website please call +91 99808 75054    |    ಸುದ್ದಿ ಹಾಗೂ ಜಾಹೀರಾತು ನೀಡಲು ಸಂಪರ್ಕಿಸಿ +91 99808 75054

Leave a Reply

Your email address will not be published. Required fields are marked *

© 2022–2026 Karavali Daily News. All Rights Reserved | Powered by webbrahma