ಕುಂದಾಪುರ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶಂಕರನಾರಾಯಣ ಮದರ್ ಥೆರೆಸಾ ಮೆಮೋರಿಯಲ್ ಪ್ರೌಢಶಾಲೆ ವಿದ್ಯಾರ್ಥಿ ಪ್ರೀತಮ್ ಜಿ. ಪೂಜಾರಿ 625 ಅಂಕ ಪಡೆದು ರಾಜ್ಯಕ್ಕೆ ಫಸ್ಟ್ ಬಂದಿದ್ದಾನೆ. ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾನೆ.
ಖಾಸಗಿ ಬಸ್ ಕಂಡಕ್ಟರ್ ಪುತ್ರ ಪ್ರೀತಮ್ ಪೂಜಾರಿ 625 ಅಂಕ ಬಾಚಿಕೊಂಡಿದ್ದಾನೆ. ಪ್ರೀತಮ್ ಪೂಜಾರಿ ಬಿದ್ಕಲ್ಕಟ್ಟೆ ನಿವಾಸಿ ಗಣಪತಿ ಪೂಜಾರಿ-ನಾಗರತ್ನಾ ದಂಪತಿ ಪುತ್ರ. ತಂದೆ ಗಣಪತಿ ಲಕ್ಷ್ಮೀ ಎಕ್ಸ್ ಪ್ರೆಸ್ ಖಾಸಗಿ ಬಸ್ ನಲ್ಲಿ ಕಂಡಕ್ಟರ್. ತಾಯಿ ನಾಗರತ್ನಾ ಗೃಹಿಣಿ. ಎಲ್.ಕೆ.ಜಿ.ಯಿಂದಲೂ ಈತ ಮದರ್ ಥೆರೆಸಾ ಸಂಸ್ಥೆಯಲ್ಲಿ ಓದುತ್ತಿದ್ದಾನೆ.
ಕುಂದಾಪುರಕ್ಕೆ ಕುಂದಾ ಸುವಾಸನೆ ತಂದ ಕಂಡಕ್ಟರ್ ಪುತ್ರ ಪ್ರೀತಮ್ ಪೂಜಾರಿ ಎಸ್ ಎಸ್ ಎಲ್ ಸಿಯಲ್ಲಿ ರಾಜ್ಯಕ್ಕೆ ಫಸ್ಟ್





