ಮೂಡುಬಿದಿರೆ : ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಈ ಬಾರಿಯ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟಿಸಿದ್ದು, ಆಳ್ವಾಸ್ ಶಾಲೆ 75 ಮಂದಿ ವಿದ್ಯಾರ್ಥಿಗಳು 625 ಕ್ಕೆ 600 ಕ್ಕೂ ಹೆಚ್ಚು ಅಂಕ ಪಡೆವ ಮೂಲಕ ಸಾಧನೆ ಮೆರೆದಿದ್ದಾರೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಅವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಸಾಧ್ವಿ ಪಿ.ವಿ (622), ಪ್ರಥ್ವಿರಾಜ್ ರೆಡ್ಡಿ (621), ಆದರ್ಶ (620), ಲಕ್ಷಿö್ಮ(619), ಪವನ್ ಕುಮಾರ್ (619), ಶಾಂಭವಿ (618), ಅನ್ವಿತಾ ಬಿ(617), ಶಂಕರ ಗೌಡ(617), ಶ್ರೇಯಾ (616), ಸುಶ್ಮಿತಾ (616), ದಿಲೀಪ್ (615), ಕೇಶವ (615), ಪ್ರಿಯಾಂಕ (615), ಸ್ವಾತಿ (615), ವೀರೇಶ್(615) ಅಂಕಗಳನ್ನು ಪಡೆಯುವುದರ ಮೂಲಕ ವಿಶಿಷ್ಠ ಸಾಧನೆ ಮೆರೆದಿದ್ದಾರೆ ಎಂದು ತಿಳಿಸಿದರು.
93 ಮಂದಿ ವಿದ್ಯಾರ್ಥಿಗಳು ಶೇ 95 ಕ್ಕೂ ಅಧಿಕ, 184 ವಿದ್ಯಾರ್ಥಿಗಳು ಶೇ 90 ಕ್ಕೂ ಅಧಿಕ, 247 ವಿದ್ಯಾರ್ಥಿಗಳು ಶೇ 85 ಕ್ಕೂ ಅಧಿಕ ಅಂಕ ಪಡೆದಿದ್ದಾರೆ. ನಾಲ್ಕು ವಿಷಯಗಳಲ್ಲಿ 5 ಮಂದಿ ವಿದ್ಯಾರ್ಥಿಗಳು, ಮೂರು ವಿಷಯಗಳಲ್ಲಿ 13, ಎರಡು ವಿಷಯಗಳಲ್ಲಿ 37, ಹಾಗೂ 1 ವಿಷಯದಲ್ಲಿ 85 ವಿದ್ಯಾರ್ಥಿಗಳು ಶೇ 100 ಅಂಕ. ಆಳ್ವಾಸ್ ವಿದ್ಯಾರ್ಥಿಗಳು ಅಂತಿಮ ಪರೀಕ್ಷೆಯಲ್ಲಿ ಶೇ 95ಕ್ಕಿಂತ ಹೆಚ್ಚು ಅಂಕಗಳನ್ನು 139 ಮಂದಿ ವಿದ್ಯಾರ್ಥಿಗಳು ಗಳಿಸಿದ್ದಾರೆ ಎಂದರು.
ಆಳ್ವಾಸ್ ಕನ್ನಡ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕ ಪ್ರಶಾಂತ್ ಬಿ., ಆಳ್ವಾಸ್ ಆಂಗ್ಲ ಮಾಧ್ಯಮ ಶಾಲೆ ಮುಖ್ಯ ಶಿಕ್ಷಕಿ ವಿಜಯಾ ಟಿ. ಮೂರ್ತಿ, ಆಡಳಿತಾಧಿಕಾರಿ ಪ್ರೀತಂ ಕುಂದರ್ ಹಾಗೂ ಸಹಾಯಕ ಆಡಳಿತಾಧಿಕಾರಿ ರಾಜೇಶ್ ಕುಮಾರ್ ಶೆಟ್ಟಿ ಇದ್ದರು.





