ಮೇ 1 ರಂದು ಕಾರ್ಮಿಕ ದಿನ, ಅರ್ಥಪೂರ್ಣ ಆಚರಣೆ: ಐವನ್ ಡಿಸೋಜ

2802

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಮಿಕ ಪರಿಷತ್ ಹಾಗೂ ಮಂಗಳೂರು ಮಹಾನಗರ ಆಟೋರಿಕ್ಷಾ ಚಾಲಕರ-ಮಾಲೀಕರ ಸಂಘದ ವತಿಯಿಂದ ಮೇ 1ರಂದು “ಕಾರ್ಮಿಕ ದಿನಾಚರಣೆ”ಯನ್ನು ಅರ್ಥಪೂರ್ಣವಾಗಿ ಆಚರಿಸಲಾಗುತ್ತದೆ ಎಂದು ಎಂಎಲ್ ಸಿ ಐವನ್ ಡಿಸೋಜ ಅವರು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಸಮಾರಂಭದಲ್ಲಿ ಕಾರ್ಮಿಕರಿಗೆ ಸನ್ಮಾನ ಹಾಗೂ ವಿವಿಧ ಸೌಲಭ್ಯಗಳ ವಿತರಣಾ ಕಾರ್ಯಕ್ರಮ ನಡೆಯಲಿದೆ. ನನ್ನ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ಮಂಗಳೂರು ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ಕೆ. ರವಿಶಂಕರ್ ಅವರು ಆಗಮಿಸಲಿದ್ದಾರೆ. ಕಾರ್ಮಿಕರಿಗೆ ಸರ್ಕಾರದಿಂದ ಸಿಗುವ ವಿವಿಧ ಸೌಲಭ್ಯಗಳು ಮತ್ತು ಯೋಜನೆಗಳ ಬಗ್ಗೆ ಮಾಹಿತಿ ನೀಡಲು ಕಾರ್ಮಿಕ ಅಧಿಕಾರಿ ವಿಲ್ಮಾ ತೌರೋ ಅವರು ಉಪಸ್ಥಿತರಿರಲಿದ್ದಾರೆ. ಈ ಕಾರ್ಯಕ್ರಮ ಮಂಗಳೂರಿನ ಹಂಪನಕಟ್ಟೆಯ ತಾಜ್ ಮಹಲ್ ಆಟೋ ಪಾರ್ಕ್ ನಲ್ಲಿ ಬೆಳಿಗ್ಗೆ 10. 30ಕ್ಕೆ ಪ್ರಾರಂಭವಾಗಲಿದೆ. ಸಂಘಟನೆಯ ಪರವಾಗಿ ಎಲ್ಲಾ ಕಾರ್ಮಿಕರು ಪಾಲ್ಗೊಳ್ಳಬೇಕು ಎಂದರು.

ನಾಗೇಂದ್ರ ಕುಮಾ‌ರ್, ರಾಜೇಶ್, ಇಸ್ಮಾಯಿಲ್, ಮ್ಯಾಕ್ಸಿ ಮಿರಾಂಡ ಮತ್ತು ಅನಿಲ್ ಲೋಬೊ ಇದ್ದರು.

📢 To advertise on this website please call +91 99808 75054    |    ಸುದ್ದಿ ಹಾಗೂ ಜಾಹೀರಾತು ನೀಡಲು ಸಂಪರ್ಕಿಸಿ +91 99808 75054

Leave a Reply

Your email address will not be published. Required fields are marked *

© 2022–2026 Karavali Daily News. All Rights Reserved | Powered by webbrahma