
ಅಂಕೋಲಾ: ಉತ್ತರ ಕನ್ನಡ ಜಿಲ್ಲೆಯ ಕಾರವಾರ ಪಿಕಳೆ ನರ್ಸಿಂಗ್ ಹೋಂನ ರಾಜು ಪಿಕಳೆ ಅವರು ಡಬಲ್ ಬ್ಯಾರಲ್ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಹಟ್ವಿಕೇರಿಯಲ್ಲಿ ಶುಕ್ರವಾರ ನಡೆದಿದೆ.
ರಾಜು ಪೀಕಳೆ ಅವರು ಹಟ್ವಿಕೇರಿಯಲ್ಲಿ ಇರುವ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಅಂಕೋಲಾ ಪೊಲೀಸರು ದೌಡಾಯಿಸಿ ಬಂದು ಪರಿಶೀಲನೆ ನಡೆಸಿದ್ದಾರೆ.

ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ, ತನಿಖೆ ನಡೆಯುತ್ತಿದ್ದು, ಈ ಕುರಿತು ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಂತಾಪ: ಪಿಕಳೆ ನರ್ಸಿಂಗ್ ಹೋಂನ ರಾಜು ಪಿಕಳೆ ಅವರ ನಿಧನಕ್ಕೆ ಸಾಮಾಜಿಕ ಹೋರಾಟಗಾರ ಮಾಧವ ನಾಯಕ್ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.


