ಅಮೆರಿಕ, ಇಸ್ರೇಲ್ ದಾಳಿ, ಇರಾನ್‌ ಸರ್ವೋಚ್ಚ ನಾಯಕ ಅಯಾತೊಲ್ಲಾ ಅಲಿ ಖಮೇನಿ ಸಾವು, ಭುಗಿಲೆದ್ದ ಆಕ್ರೋಶ

ಟ್ರಾಹಾನ್ : ಅಮೆರಿಕ ಮತ್ತು ಇಸ್ರೇಲ್ ನಡೆಸಿದ ಜಂಟಿ ದಾಳಿಯಲ್ಲಿ ಇರಾನ್‌ ಸರ್ವೋಚ್ಚ ನಾಯಕ ಅಯಾತೊಲ್ಲಾ ಅಲಿ ಖಮೇನಿ ಮೃತಪಟ್ಟಿದ್ದಾರೆ. ಅಮೆರಿಕ ಮತ್ತು ಇಸ್ರೇಲ್ ನಡೆ ಖಂಡಿಸಿ ವಿಶ್ವದ ಹಲವೆಡೆ ಆಕ್ರೋಶ ಭುಗಿಲೆದ್ದಿದೆ.

ಇರಾನ್‌ ಧಾರ್ಮಿಕ ನಾಯಕ ಆಯತೊಲ್ಲಾ ಅಲಿ ಖಮೇನಿ ಹತ್ಯೆಯ ನಂತರ ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ತೀವ್ರಗೊಂಡಿದೆ. ಅಮೆರಿಕ–ಇರಾನ್ ಜಂಟಿ ದಾಳಿಯಲ್ಲಿ ಖಮೇನಿ ಸಾವನ್ನಪ್ಪಿರುವ ವರದಿಗಳ ನಡುವೆಯೇ, ಇರಾನ್ ಪಡೆಗಳು ಪ್ರತೀಕಾರದ ಹೆಸರಿನಲ್ಲಿ ಕೊಲ್ಲಿ ರಾಷ್ಟ್ರಗಳತ್ತ ದಾಳಿ ಆರಂಭಿಸಿವೆ.

ಅಮೆರಿಕ ಸೇನಾ ನೆಲೆಗಳು ಇರುವ ಯುನೈಟೆಡ್ ಅರಬ್ ಎಮಿರೇಟ್ಸ್, ಕತಾರ್ ಹಾಗೂ ಬಹ್ರೇನ್ ದೇಶಗಳನ್ನು ಗುರಿಯಾಗಿಸಿಕೊಂಡು ಡ್ರೋನ್ ಮತ್ತು ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿ ನಡೆಸಲಾಗಿದೆ. ಯುನೈಟೆಡ್ ಅರಬ್ ಎಮಿರೇಟ್ಸ್ ಮೇಲೆ 200 ಕ್ಕೂ ಅಧಿಕ ಡ್ರೋನ್‌ಗಳು ಮತ್ತು ನೂರಕ್ಕೂ ಹೆಚ್ಚು ಕ್ಷಿಪಣಿಗಳು ಉಡಾಯಿಸಲ್ಪಟ್ಟಿವೆ ಎಂದು ಅಲ್ಲಿನ ರಕ್ಷಣಾ ಇಲಾಖೆ ತಿಳಿಸಿದೆ.

Leave a Reply

Your email address will not be published. Required fields are marked *