ಯುದ್ದ ಪೀಡಿತ ಪ್ರದೇಶಗಳಲ್ಲಿ ಸಿಕ್ಕು ಹಾಕಿಕೊಂಡಿರುವ ಕಲಬುರಗಿ ಜಿಲ್ಲೆಯ ಜನರಿಗೆ ಸಹಾಯವಾಣಿ ಆರಂಭ: ಡಿಸಿ ಫೌಜಿಯಾ ತರನ್ನುಮ್

ಕಲಬುರಗಿ: ಮಧ್ಯಪ್ರಾಚ್ಯ ಹಾಗೂ ಕೊಲ್ಲಿ ರಾಷ್ಟ್ರಗಳಲ್ಲಿ ಯುದ್ಧದ ಕಿಚ್ಚು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಇಲ್ಲಿ ನೆಲೆಸಿರುವ ಜಿಲ್ಲೆಯ ನಿವಾಸಿಗಳ ಸುರಕ್ಷತೆಗೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದು, ಸಹಾಯವಾಣಿ ಆರಂಭಿಸಲಾಗಿದೆ ಎಂದು ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಯುದ್ಧ ಪೀಡಿತ ಪ್ರದೇಶಗಳಲ್ಲಿ ಕಲಬುರಗಿ ಸೇರಿದಂತೆ ರಾಜ್ಯದ ಅನೇಕರು ಸಿಲುಕಿಕೊಂಡಿರುವ ಮಾಹಿತಿ ಲಭ್ಯ ಆಗಿದ್ದು, ಅವರ ನೆರವಿಗೆ ಜಿಲ್ಲಾ, ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಸಹಾಯವಾಣಿ ಆರಂಭಿಸಲಾಗಿದೆ. ಸಂಕಷ್ಟದಲ್ಲಿ ಇರುವವರು ಕೂಡಲೇ ಭಾರತೀಯ ರಾಯಭಾರಿ ಕಚೇರಿಗಳ ಸಂಪರ್ಕ ಸಾಧಿಸಬೇಕು. ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಸಾರಥಿ ಸಹಾಯತಾ ಪೋರ್ಟಲ್‌ನಲ್ಲಿ ನೋಂದಣಿ ಮಾಡಿಕೊಳ್ಳಬೇಕು ಎಂದು ತಿಳಿಸಿದ್ದಾರೆ.

ಒಂದು ವೇಳೆ ಕಲಬುರಗಿ ಜಿಲ್ಲೆಯ ನಿವಾಸಿಗಳು ಯುದ್ಧ ಪೀಡಿತ ದೇಶಗಳಲ್ಲಿ ಸಿಲುಕಿದ್ದರೆ, ಅವರ ಕುಟುಂಬದವರು ಈ ಕೆಳಗಿನ ಸಂಖ್ಯೆಗಳಿಗೆ ಮಾಹಿತಿ ನೀಡಬಹುದಾಗಿದೆ: ಜಿಲ್ಲಾ ವಿಪತ್ತು ನಿಯಂತ್ರಣ ಕೊಠಡಿ: 08472-278677, ಪೊಲೀಸ್ ನಿಯಂತ್ರಣ ಕೊಠಡಿ: 9480805500, 9480803500, ಇತರ ದೂರವಾಣಿ ಸಂಖ್ಯೆಗಳು: 08472-263604, 08472-228112, ಸಂಕಷ್ಟದಲ್ಲಿ ಇರುವ ಪ್ರತಿಯೊಬ್ಬ ನಾಗರಿಕನಿಗೂ ನೆರವಾಗಲು ಸರ್ಕಾರ ಬದ್ಧವಾಗಿದ್ದು, ಸಾರ್ವಜನಿಕರು ಆತಂಕ ಪಡದೆ ಅಧಿಕೃತ ಸೂಚನೆಗಳನ್ನು ಪಾಲಿಸಬೇಕೆಂದು ಜಿಲ್ಲಾಧಿಕಾರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *