ಮಂಗಳೂರು: ರೋಹನ್ ಕಾರ್ಪೋರೇಷನ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ವತಿಯಿಂದ ಶನಿವಾರ ಮಂಗಳೂರಿನ ಬಿಜೈನಲ್ಲಿರುವ ರೋಹನ್ ಸಿಟಿ ಸೈಟ್ ಪ್ರಾಜೆಕ್ಟ್ ನಲ್ಲಿ 52 ನೇ ರಾಷ್ಟ್ರೀಯ ಸುರಕ್ಷತಾ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ರೋಹನ್ ಮೊಂತೇರೊ ಸುರಕ್ಷಾ ಧ್ವಜಾರೋಹಣ ನೆರವೇರಿಸಿದರು.
ಧ್ವಜಾರೋಹಣದಲ್ಲಿ ಪಾಲ್ಗೊಂಡಿದ್ದ ನೂರಾರು ಸಂಖ್ಯೆಯ ಸಿಬ್ಬಂದಿಗೆ ನೌಕರರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ರೋಹನ್ ಮೊಂತೇರೊ ಅವರು ಸಂದೇಶ ನೀಡಿ, ಕಾರ್ಮಿಕ ಸಮುದಾಯ ಮತ್ತು ಪರಿಸರ ಸಂರಕ್ಷಣೆಯ ಉದ್ದೇಶದಿಂದ ಅಪಾಯ ಮುಕ್ತ ಕೈಗಾರಿಕಾ ಅಭಿವೃದ್ಧಿಗೆ ಮತ್ತು ಕಾರ್ಮಿಕ ಕಲ್ಯಾಣಕ್ಕಾಗಿ ಪ್ರತಿವರ್ಷ ಮಾರ್ಚ್ .4 ರಂದು ರಾಷ್ಟ್ರೀಯ ಸುರಕ್ಷತಾ ದಿನಾಚರಣೆ ಆಚರಿಸಲಾಗುತ್ತಿದೆ ಎಂದರು.