ಮೂಡುಬಿದಿರೆ: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಮಂಗಳೂರು ಉತ್ತರ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಮನೋಜ್ ಕುಮಾರ್ ಹಾಗೂ ಮೂಡುಬಿದಿರೆ ಪೊಲೀಸ್ ನಿರೀಕ್ಷಕ ನಿರಂಜನ್ ಕುಮಾರ್ ಅವರ ನೇತೃತ್ವದಲ್ಲಿ ಆಲಂಗಾರು ಬಡಗು ಮಹಾಲೀಂಗೇಶ್ವರ ದೇವಸ್ಥಾನದ ಬಳಿಯಿಂದ ಮೂಡುಬಿದಿರೆ ಕನ್ನಡ ಭವನದವರೆಗೆ ಗುರುವಾರ ಪೊಲೀಸರಿಂದ ಆಕರ್ಷಕ ಪಥ ಸಂಚಲನ ನಡೆಯಿತು.
ಕೇಂದ್ರ ಮೀಸಲು ಪೊಲೀಸ್ ಪಡೆಯ 80 ಮಂದಿ ಅಧಿಕಾರಿಗಳು ಮತ್ತು ಮೂಡುಬಿದಿರೆ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಪಥಸಂಚಲನದಲ್ಲಿ ಪಾಲ್ಗೊಂಡಿದ್ದರು.