ಎಸ್.ಎಸ್.ಎಲ್.ಸಿ. ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ಭೇಟಿ

WhatsApp Image 2026 03 18 at 5.44.07 PM

ಕಾರವಾರ: ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಜಿಲ್ಲೆಯಲ್ಲಿ ಪಾರದರ್ಶಕವಾಗಿ ಮತ್ತು ಸುಗಮವಾಗಿ ನಡೆಯುತ್ತಿರುವ ಕುರಿತಂತೆ ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ಅವರು ವಿವಿಧ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

WhatsApp Image 2026 03 18 at 5.42.57 PM

ಕಾರವಾರದ ಸಂತ್ ಮೈಕಲ್ ಮತ್ತು ಹಿಂದೂ ಹೈಸ್ಕೂಲ್ ಗೆ ಭೇಟಿ ನೀಡಿ ಪರಿಶೀಲಿಸಿದ ಅವರು, ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ಅಗತ್ಯ ಇರುವ ಎಲ್ಲ ಮೂಲ ಸೌಲಭ್ಯಗಳನ್ನು ಒದಗಿಸಿರುವ ಕುರಿತು ಪರಿಶೀಲಿಸಿದರು. ಪರೀಕ್ಷಾ ಮಂಡಳಿ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಶಿಕ್ಷಕರಿಗೆ ಸೂಚನೆ ನೀಡಿ, ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯುವಂತೆ ಪ್ರೋತ್ಸಾಹಿಸಿದರು.

ಪರೀಕ್ಷಾ ಕೇಂದ್ರಗಳಲ್ಲಿ ಅಳವಡಿಸಿರುವ ಸಿಸಿಟಿವಿ ಕೊಠಡಿಗಳನ್ನು ವೀಕ್ಷಿಸಿದ ಅವರು, ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿನ ವೆಬ್ ಕ್ಯಾಸ್ಟಿಂಗ್ ವ್ಯವಸ್ಥೆಯ ಕುರಿತು ಪರಿಶೀಲಿಸಿದರು. ಡಿಡಿಪಿಐ ಲತಾ ನಾಯಕ್ ಇದ್ದರು.

📢 To advertise on this website please call +91 99808 75054    |    ಸುದ್ದಿ ಹಾಗೂ ಜಾಹೀರಾತು ನೀಡಲು ಸಂಪರ್ಕಿಸಿ +91 99808 75054

Leave a Reply

Your email address will not be published. Required fields are marked *

© 2022–2026 Karavali Daily News. All Rights Reserved | Powered by webbrahma