ಕಲಬುರಗಿ: ಭೀಕರ ರಸ್ತೆ ಅಪಘಾತ ಇಬ್ಬರ ಸಾವು, ಇನ್ನಿಬ್ಬರಿಗೆ ಗಂಭೀರ ಗಾಯ

Spread the love

ಕಲಬುರಗಿ: ಕಾರು ಮತ್ತು ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತಾಯಿ ಮತ್ತು ಮಗು ಮೃತಪಟ್ಟು, ಕುಟುಂಬದ ಮತ್ತೆ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನದಿಸಿನ್ನೂರ ಗ್ರಾಮದ ಬಳಿ ನಡೆದಿದೆ.

ಬೀದರ್ ಮೂಲದ ಬಟ್ಟೆ ವ್ಯಾಪಾರಿ ಫಿರೋಜ್ ಖಾನ್ (34) ಅವರು ವ್ಯಾಪಾರಕ್ಕೆ ಜೇವರ್ಗಿಗೆ ಬಂದಿದ್ದರು. ಬಳಿಕ ಗರ್ಭಿಣಿ ಪತ್ನಿ ಪ್ರವೀದ್ ಶೇಖ್‌ (32) ಅವರನ್ನು ತಪಾಸಣೆಗಾಗಿ ಕಲಬುರಗಿ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಸ್ಕೂಟರ್‌ನಲ್ಲಿ ಪತ್ನಿ ಹಾಗೂ ಇಬ್ಬರು ಮಕ್ಕಳಾದ ಅಭಿಷಾನ್ (2), ನಾಝಿಯಾ (5) ಜೊತೆಗೆ ಪ್ರಯಾಣಿಸುತ್ತಿದ್ದಾಗ, ನದಿಸಿನ್ನೂರ ಗ್ರಾಮದ ಬಳಿ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಪ್ರವೀದ್ ಶೇಖ್‌ ಸ್ಥಳದಲ್ಲೇ ಮೃತಪಟ್ಟರೆ, ಗಂಭೀರವಾಗಿ ಗಾಯಗೊಂಡಿದ್ದ ಮಗು ಅಭಿಷಾನ್ ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿಯ ಮಧ್ಯೆ ಮೃತಪಟ್ಟಿದೆ ಎಂದು ತಿಳಿದು ಬಂದಿದೆ.

ಫಿರೋಜ್ ಖಾನ್ ಹಾಗೂ ಮಗಳು ನಾಝಿಯಾ ಗಂಭೀರವಾಗಿ ಗಾಯಗೊಂಡಿದ್ದು, ಕಲಬುರಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕುರಿತು ಪ್ರಕರಣ ದಾಖಲಾಗಿದೆ.

📢 To advertise on this website please call +91 99808 75054    |    ಸುದ್ದಿ ಹಾಗೂ ಜಾಹೀರಾತು ನೀಡಲು ಸಂಪರ್ಕಿಸಿ +91 99808 75054

Leave a Reply

Your email address will not be published. Required fields are marked *