ಪಶ್ಚಿಮ ಬಂಗಾಳದಲ್ಲಿ 294 ವಿಧಾನಸಭಾ ಕ್ಷೇತ್ರಕ್ಕೆ 294 ಚುನಾವಣಾ ವೀಕ್ಷಕರ ನಿಯೋಜನೆ

Spread the love

ಕೋಲ್ಕತಾ: ಚುನಾವಣಾ ಆಯೋಗವು ಪಶ್ಚಿಮ ಬಂಗಾಳದಲ್ಲಿ 294 ವಿಧಾನಸಭಾ ಕ್ಷೇತ್ರಗಳಿಗೆ ತಲಾ ಒಂದರಂತೆ 294 ಚುನಾವಣಾ ವೀಕ್ಷಕರನ್ನು ನಿಯೋಜಿಸಿದೆ. ಇದು ಈ ವರ್ಷ ಚುನಾವಣೆ ನಡೆಯಲಿರುವ ಯಾವುದೇ ರಾಜ್ಯದಲ್ಲಿ ನಿಯೋಜಿಸಲಾಗಿರುವ ಚುನಾವಣಾ ವೀಕ್ಷಕರ ಅತ್ಯಧಿಕ ಸಂಖ್ಯೆ ಆಗಿದೆ.

ಪಶ್ಚಿಮ ಬಂಗಾಳದಲ್ಲಿ ನಿಯೋಜನೆ ಮಾಡಲಾಗಿರುವ ಚುನಾವಣಾ ವೀಕ್ಷಕರು ಹೊರ ರಾಜ್ಯಗಳ ಐಎಎಸ್ ಅಧಿಕಾರಿಗಳು ಎಂಬುದು ವಿಶೇಷ . ಅವರು ತಮ್ಮ ವಿಧಾನಸಭಾ ಕ್ಷೇತ್ರಗಳಲ್ಲಿ ಚುನಾವಣಾ ಪ್ರಕ್ರಿಯೆ ಮೇಲೆ ತೀವ್ರ ನಿಗಾ ಇಡಲಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಚುನಾವಣೆ ಏಪ್ರಿಲ್ 23 ಮತ್ತು 29 ರಂದು ಎರಡು ಹಂತಗಳಲ್ಲಿ ನಡೆಯಲಿದೆ. ಫಲಿತಾಂಶವು ಮೇ 4 ರಂದು ಹೊರಬೀಳಲಿದೆ. ರಾಜ್ಯಾದ್ಯಂತ 80,600 ಮತಗಟ್ಟೆಗಳಲ್ಲಿ ಮತದಾನ ನಡೆಯಲಿದೆ.

📢 To advertise on this website please call +91 99808 75054    |    ಸುದ್ದಿ ಹಾಗೂ ಜಾಹೀರಾತು ನೀಡಲು ಸಂಪರ್ಕಿಸಿ +91 99808 75054

Leave a Reply

Your email address will not be published. Required fields are marked *