ವಸ್ತು ಪ್ರದರ್ಶನ, ಮಹಿಳಾ ಸಾಧಕರಿಗೆ ಸನ್ಮಾನ, ಮಹಿಳಾ ಸಬಲೀಕರಣದಿಂದ ಸ್ವಾಸ್ಥ್ಯ ಸಮಾಜ ನಿರ್ಮಾಣ: ಜಿ.ಪಂ. ಉಪಕಾರ್ಯದರ್ಶಿ ಜಯಲಕ್ಷ್ಮಿ ರಾಯಕೋಡ್  

WhatsApp Image 2026 03 26 at 4.40.47 PM

ಮಂಗಳೂರು: ಮಹಿಳೆಯರಿಗೆ ಆರ್ಥಿಕ ಸ್ವಾವಲಂಬನೆ ಅಗತ್ಯ, ಜಿಲ್ಲೆಯ ಮಹಿಳೆಯರು ತಮ್ಮ ಕುಟುಂಬದ ಆರ್ಥಿಕ ನಿರ್ವಹಣೆಯನ್ನು ಕಷ್ಟಪಟ್ಟು ಎಚ್ಚರಿಕೆ ಯಿಂದ ಮಾಡುತ್ತಾ ಬಂದಿದ್ದಾರೆ ಕರ್ನಾಟಕ ರಾಜ್ಯ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ ತಿಳಿಸಿದ್ದಾರೆ.

ಮಹಿಳಾ ದಿನಾಚರಣೆಯ ಅಂಗವಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಚೇರಿ ಸಭಾಂಗಣದಲ್ಲಿ ಗುರುವಾರ ರೋಟರಿ ಕ್ಲಬ್ ಆಫ್ ಮಂಗಳೂರು ಸೆಂಟ್ರಲ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಗ್ಲೋಬಲ್ ಗ್ರೀನ್ ಇಕೋ ಫೌಂಡೇಶನ್ ಆಶ್ರಯದಲ್ಲಿ ಮಹಿಳಾ ದಿನಾಚರಣೆ ಮತ್ತು ಮಹಿಳಾ ಉದ್ಯಮಿಗಳು ತಯಾರಿಸಿದ ಉತ್ಪನ್ನಗಳ ಪ್ರದರ್ಶನ, ಮಹಿಳಾ ಸಾಧಕರಿಯರಿಗೆ ಸನ್ಮಾನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

2602

ಮಹಿಳೆ ಕುಟುಂಬದಲ್ಲಿ ವಿವಿಧ ರೀತಿಯಲ್ಲಿ ಕುಟುಂಬದ ಸಮಾಜದ ಶಕ್ತಿ ಆಗಿದ್ದಾಳೆ. ಸರಕಾರದ ಗ್ಯಾರಂಟಿ ಯೋಜನೆಯ ಮೂಲಕ ಮಹಿಳೆಯರ ಖಾತೆಗೆ ಹಣ ಜಮೆ ಆಗುತ್ತಿದೆ. ಇದರಿಂದ ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ಸಹಕಾರಿ ಆಗುತ್ತದೆ ಎಂದರು.

ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಎಸಿಪಿ ನಜ್ಮಾ ಫಾರೂಕಿ, ತೊಟ್ಟಿಲು ತೂಗುವ ಕೈ ಜಗತ್ತು ಆಳುತ್ತವೆ ಎನ್ನುವ ಮಾತಿನಂತೆ, ಮಹಿಳೆಯರು ದೇಶದಲ್ಲಿ ಸಾಧನೆ ಮಾಡಿದ್ದಾರೆ. ಆದರೆ, ಇನ್ನೂ ಸಾಕಷ್ಟು ಹಿಂದುಳಿದ ಪ್ರದೇಶದಲ್ಲಿ ಮಹಿಳೆಯರು ಸ್ಥಾನಮಾನ ಪಡೆಯಲು ಕಷ್ಟ ಪಡುತ್ತಿದ್ದು, ಈ ಪರಿಸ್ಥಿತಿ ಬದಲಾಗಬೇಕು. ಪೊಲೀಸ್ ಇಲಾಖೆ ಮಹಿಳೆಯರ ರಕ್ಷಣೆಗೆ ಗುಲಾಬಿ, ಹೊಯ್ಸಳ ಪೊಲೀಸ್ ತಂಡವನ್ನು ರಚನೆ ಮಾಡಿದ್ದು, ಮಹಿಳಾ ಸುರಕ್ಷತೆ ಪೊಲೀಸರ ಜತೆ ಸಾಮೂಹಿಕ ಜವಾಬ್ದಾರಿ ವಹಿಸಬೇಕು ಎಂದರು.

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಜಯಲಕ್ಷ್ಮಿ ರಾಯಕೋಡ್ ಅವರು ಮಾತನಾಡಿ, ಮಹಿಳಾ ಸಬಲೀಕರಣದ ನಿಟ್ಟಿನಲ್ಲಿ ಮಹಿಳಾ ದಿನಾಚರಣೆ ನಡೆಸಲಾಗುತ್ತಿದ್ದು, ಮಹಿಳಾ ಸಶಕ್ತತೆಗೆ ಪುರುಷ -ಮಹಿಳೆ ಪರಸ್ಪರ ಸಮಾನವಾಗಿ, ಪೂರಕವಾಗಿ ಕಾರ್ಯನಿರ್ವಹಿಸಬೇಕಾಗಿದೆ ಎಂದರು.

ಸಮಾರಂಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಉಸ್ಮಾನ್ ಎ, ದಕ್ಷಿಣ ಕನ್ನಡ ಜಿಲ್ಲಾ ಸ್ತ್ರೀಶಕ್ತಿ ಒಕ್ಕೂಟದ ಅಧ್ಯಕ್ಷೆ ಶಕುಂತಳಾ, ಅತಿಥಿಗಳಾಗಿ ಪ್ರೊ. ಡಾ. ಚಿನ್ನಗಿರಿ ಗೌಡ, ರಜನಿ ಭಟ್, ಚಂದ್ರಿಕಾ ಎಸ್. ನಾಯಕ್, ಸತೀಶ್ ಮೊಬೆನ್, ಪುಷ್ಪರಾಜ್ ಬಿ.ಎನ್, ಶ್ರೀನಿವಾಸ ನಾಯಕ್ ಇಂದಾಜೆ, ಮಾಜಿ ರೋಟರಿ ಅಸಿಸ್ಟೆಂಟ್ ಗವರ್ನರ್ ರಾಜಗೋಪಾಲ ರೈ,ಮಾಜಿ ಅಧ್ಯಕ್ಷ ಸಂತೋಷ್ ಶೇಟ್,ರಾಜೇಶ್ ಶೆಟ್ಟಿ, ಕಾರ್ಯದರ್ಶಿ ವಿಕಾಸ್ ಕೋಟ್ಯಾನ್, ರೋಟರಿ ಪದಾಧಿಕಾರಿಗಳಾದ ಜಾಕ್ಸನ್ ಸಲ್ದಾನ,ಶೆಲ್ಡನ್ ಕ್ರಾಸ್ತಾ,ಡೆರಿಲ್ ಡಿ ಸೋಜ,ಪ್ರಮೀಳ ಶೆಟ್ಟಿ ಇದ್ದರು.

ಸಮಾರಂಭದಲ್ಲಿ ಮಹಿಳಾ ಸಾಧಕರಾದ ಜ್ಯೋತಿ ಕೆ. ಉಳೆಪ್ಪಾಡಿ, ದೇವಿಕಾ ಪುರುಷೋತ್ತಮ್, ಪೂರ್ಣಿಮಾ ರೈ, ಪ್ರಮೀಳಾ ರಾವ್,ಜಯಶ್ರೀ ರಟ್ಟಿಹಳ್ಳಿ, ವಿಭಾ ಎಸ್. ನಾಯಕ್,ಡಾ. ರಶ್ಮಿ ಕೆ.ಸುಜಾತಾ, ಶ್ರದ್ಧಾ ಕೇಶವ ರಾಮಕುಂಜ, ಪೊಟ್ಟಮ್ಮ ಮಂಗಳೂರು, ಲಕ್ಷ್ಮೀ ಗಾಣಿಗ, ದೀಕ್ಷಿತಾ ಟಿ. ಎಸ್ ಅವರನ್ನು ಸನ್ಮಾನಿಸಲಾಯಿತು. ಸಮಾರಂಭದಲ್ಲಿ ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ಘಟಕದ ಅಧ್ಯಕ್ಷ ಭಾಸ್ಕರ ರೈ ಕಟ್ಟ ಸ್ವಾಗತಿಸಿದರು. ಪ್ರಮೀಳಾ ಹೆಗ್ಡೆ ಮತ್ತು ಗೀತಾ ಬಿ ರೈ ನಿರೂಪಿಸಿದರು.

📢 To advertise on this website please call +91 99808 75054    |    ಸುದ್ದಿ ಹಾಗೂ ಜಾಹೀರಾತು ನೀಡಲು ಸಂಪರ್ಕಿಸಿ +91 99808 75054

Leave a Reply

Your email address will not be published. Required fields are marked *

© 2022–2026 Karavali Daily News. All Rights Reserved | Powered by webbrahma