ಉಳ್ಳಾಲ: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಭೀಕರ ಹತ್ಯೆ, ಘಟನಾ ಸ್ಥಳಕ್ಕೆ ಪೊಲೀಸರ ದೌಡು

Spread the love

ಉಳ್ಳಾಲ: ತೊಕ್ಕೊಟ್ಟು ಫ್ಲೈ ಓವರಲ್ಲಿ ರಾತ್ರಿ 3.30 ಗಂಟೆಗೆ ಉಚ್ಚಿಲ ಮುಳ್ಳುಗುಡ್ಡೆ ನಿವಾಸಿ ಆರೀಫ್ ಹುಸೇನ್ (42) ಯಾನೆ ಟ್ಯಾಬ್ಲೆಟ್ ಆರೀಫ್ ಎಂಬುವವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ನಡೆದಿದೆ.

ಮೃತ ಆರೀಫ್ ಮಂಗಳೂರಿನ ಬಂದರು ಪೊಲೀಸ್ ಠಾಣೆಯಲ್ಲಿ ರೌಡಿಶೀಟರ್ ಆಗಿದ್ದು, ಆರೀಫ್ ಢಕ್ಕೆಯಲ್ಲಿ ಮೀನಿನ ವ್ಯಾಪಾರ ನಡೆಸುತ್ತಿದ್ದು ಶುಕ್ರವಾರ ಬೆಳಿಗ್ಗೆ ಬುಲೆಟ್ ಬೈಕ್ ನಲ್ಲಿ ಮಂಗಳೂರಿಗೆ ತೆರಳುತ್ತಿದ್ದ ವೇಳೆ ತೊಕ್ಕೊಟ್ಟು ಓವರ್ ಬ್ರಿಡ್ಜ್ ಸೇತುವೆಯಲ್ಲಿ ಆತನ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದು, ಕಾರಿನಿಂದ ಹಿಂಬಾಲಿಸಿಕೊಂಡು ಬಂದಿದ್ದ ತಂಡವೊಂದು ಆರೀಫ ಅವರನ್ನು ಕೊಲೆ ಮಾಡಿ ಪರಾರಿ ಆಗಿದೆ ಎಂದು ತಿಳಿದು ಬಂದಿದೆ.

2022 ರ ಮೇ ತಿಂಗಳಲ್ಲಿ ಆರೀಫ್ ಇದೇ ರೀತಿ ಬೆಳಿಗ್ಗೆ ಬೈಕ್ ನಲ್ಲಿ ಢಕ್ಕೆಗೆ ತೆರಳುತ್ತಿದ್ದ ವೇಳೆ ತಂಡವೊಂದು ದಾಳಿ ನಡೆಸಿ ಚೂರಿ ಇರಿದು ಕೊಲೆಗೆ ಯತ್ನಿಸಿತ್ತು. ಆರೀಫ್ ಕುದ್ರೋಳಿ ನಿವಾಸಿಯಾಗಿದ್ದು, ಕುಟುಂಬ ಸಮೇತ ಅಜ್ಜಿನಡ್ಕ ಬಳಿಯ ಮುಳ್ಳುಗುಡ್ಡೆ ಎಂಬಲ್ಲಿ ಮನೆ ಮಾಡಿ ವಾಸವಿದ್ದರು. ಪತ್ನಿ, ನಾಲ್ಕು ಮಂದಿ ಮಕ್ಕಳು ಇದ್ದಾರೆ. ಘಟನಾ ಸ್ಥಳಕ್ಕೆ ಡಿಸಿಪಿ ಮಿಥುನ್ ಹಾಗೂ ಪೊಲೀಸರ ತಂಡವು ಭೇಟಿ ನೀಡಿ ಪರಿಶೀಲನೆ ನಡೆಸಿದೆ.

📢 To advertise on this website please call +91 99808 75054    |    ಸುದ್ದಿ ಹಾಗೂ ಜಾಹೀರಾತು ನೀಡಲು ಸಂಪರ್ಕಿಸಿ +91 99808 75054

Leave a Reply

Your email address will not be published. Required fields are marked *