ಚಿಲಿಂಬಿ ಶಿರಡಿ ಸಾಯಿಬಾಬಾ ಮಂದಿರದಲ್ಲಿ ರಾಮನವಮಿ ಉತ್ಸವ ಅದ್ದೂರಿ ಚಾಲನೆ: ಭಕ್ತರಿಂದ ದರ್ಶನ

2801

ಮಂಗಳೂರು: ಇಲ್ಲಿನ ಚಿಲಿಂಬಿ ಶಿರಡಿ ಸಾಯಿಬಾಬಾ ಮಂದಿರದಲ್ಲಿ ರಾಮನವಮಿ ಉತ್ಸವದ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಮಾಜಿ ಮೇಯರ್ ಶಶಿಧರ್ ಹೆಗ್ಡೆ ಅವರು ವಿಧ್ಯುಕ್ತ ಚಾಲನೆ ನೀಡಿದರು.

ಮುಖ್ಯ ಅತಿಥಿಯಾಗಿ ಸಿಸಿಬಿ ಸಹಾಯಕ ಪೊಲೀಸ್ ಕಮಿಷನರ್ ಮನೋಜ್ ಕುಮಾರ್ ನಾಯಕ್, ಕಾರ್ಪೊರೇಟರ್ ಕೇಶವ ಮರೋಳಿ, ಹಾಗೂ ರಾಜೇಶ್ ದಾಸ್ , ಮಂದಿರದ ಆಡಳಿತ ಮೊಕ್ತೇಸರ ವಿಶ್ವಾಸ್ ಕುಮಾರ್ ದಾಸ್ , ಟ್ರಸ್ಟಿ ಲಾವಣ್ಯ ವಿಶ್ವಾಸ್ ಕುಮಾರ್ ದಾಸ್ ಇದ್ದರು.

WhatsApp Image 2026 03 28 at 5.13.29 PM WhatsApp Image 2026 03 28 at 5.13.30 PM

ಮಾಜಿ ಮೇಯರ್ ಭಾಸ್ಕರ್ ಮೊಯಿಲಿ, ಕೊಲ್ಲೂರು ಮೂಕಾಂಬಿಕ ದೇವಾಸ್ಥಾನದ ಮೂಕ್ತೇಶ್ವರದ ಡಾ. ಅಭಿಲಾಷ್ ಹಾಗೂ ಸಾವಿರಾರು ಸಾಯಿ ಭಕ್ತರು ಎರಡು ದಿನದ ರಾಮನವಮಿ ಉತ್ಸವದಲ್ಲಿ ಭಾಗವಹಿಸಿ ಅನ್ನಪ್ರಸಾದ ಸ್ವೀಕರಿಸಿ ಸಾಯಿ ಬಾಬಾ ಅವರ ಕೃಪೆಗೆ ಪಾತ್ರರಾದರು.

ದೇವಸ್ಥಾನದ ವತಿಯಿಂದ ಆಯೋಜಿಸಲಾದ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಲಾಗಿದ್ದು, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಿದರು.
ಮಂದಿರದ ವತಿಯಿಂದ ಅತಿಥಿಗಳನ್ನು ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಭಜನೆ, ಪೂಜೆ ಹಾಗೂ ಇತರ ಧಾರ್ಮಿಕ ವಿಧಿಗಳು ಭಕ್ತಿಭಾವದಿಂದ ನೆರವೇರಿದವು.

📢 To advertise on this website please call +91 99808 75054    |    ಸುದ್ದಿ ಹಾಗೂ ಜಾಹೀರಾತು ನೀಡಲು ಸಂಪರ್ಕಿಸಿ +91 99808 75054

Leave a Reply

Your email address will not be published. Required fields are marked *

© 2022–2026 Karavali Daily News. All Rights Reserved | Powered by webbrahma