ಎಸ್ಸಿ, ಎಸ್ಟಿ ಕುಂದು ಕೊರತೆಗಳನ್ನು ಶೀಘ್ರವೇ ಇತ್ಯರ್ಥಪಡಿಸಿ: ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಸೂಚನೆ

ಪ.ಜಾತಿ ಮತ್ತು ಪಂಗಡದವರ ಸಮಸ್ಯೆಗಳನ್ನು ಶೀಘ್ರವಾಗಿ ಇತ್ಯರ್ಥಿಸಿ ಜಿಲ್ಲಾಧಿಕಾರಿ scaled

ಕಾರವಾರ: ಎಸ್ಸಿ, ಎಸ್ಟಿ ಕುಂದು ಕೊರತೆಗಳನ್ನು ತಮ್ಮ ಹಂತದಲ್ಲಿ ಪರಿಶೀಲಿಸಿ ಸಮಸ್ಯೆ ಶೀಘ್ರವೇ ಇತ್ಯರ್ಥ ಪಡಿಸಬೇಕು ಎಂದು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಅವರು ನಿರ್ದೇಶನ ನೀಡಿದರು.

ಜಿಲ್ಲಾಧಿಕಾರಿ ಕಚೆರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

WhatsApp Image 2026 03 31 at 7.55.35 PM WhatsApp Image 2026 03 31 at 7.55.34 PM WhatsApp Image 2026 03 31 at 7.55.32 PM

ಉತ್ತರ ಕನ್ನಡ ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೇಲೆ ನಡೆವ ದೌರ್ಜನ್ಯವನ್ನು ತಡೆವ ನಿಟ್ಟಿನಲ್ಲಿ ತಕ್ಷಣವೇ ಸಂತ್ರಸ್ತರಿಗೆ ಸ್ಪಂದಿಸಬೇಕು. ಜಿಲ್ಲೆಯಲ್ಲಿ ಈ ಹಿಂದೆ ನಡೆದಿರುವ ದೌರ್ಜನ್ಯದ ಪ್ರಕರಣಗಳನ್ನು ಶೀಘ್ರವಾಗಿ ಪರಿಹರಿಸಬೇಕು ಎಂದರು.

ಜಿಲ್ಲೆಯಲ್ಲಿ ಸ್ಮಶಾನಗಳಿಗೆ ಮೀಸಲಿಟ್ಟ ನಿವೇಶಗಳನ್ನು ಅತಿಕ್ರಮಣ ಮಾಡಿರುವ ಕುರಿತು ದೂರುಗಳು ಕೇಳಿ ಬರುತ್ತಿದ್ದು, ಈ ಬಗ್ಗೆ ಸಮಗ್ರ ವರದಿ ನೀಡಬೇಕು. ಅಲೆಮಾರಿ ಜನಾಂಗದವರಿಗೆ ವಸತಿ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೃಷ್ಣಮೂರ್ತಿ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಉಮೇಶ ವೈ.ಕೆ., ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಸಮಿತಿ ಸದಸ್ಯರು ಇದ್ದರು.

📢 To advertise on this website please call +91 99808 75054    |    ಸುದ್ದಿ ಹಾಗೂ ಜಾಹೀರಾತು ನೀಡಲು ಸಂಪರ್ಕಿಸಿ +91 99808 75054

Leave a Reply

Your email address will not be published. Required fields are marked *

© 2022–2026 Karavali Daily News. All Rights Reserved | Powered by webbrahma