ಬಾಗಲಕೋಟೆ ಉಪ ಚುನಾವಣೆ: ಸಿಎಂ ಸಿದ್ದರಾಮಯ್ಯ ಭರ್ಜರಿ ಪ್ರಚಾರ

WhatsApp Image 2026 04 03 at 6.25.28 PM

ಬಾಗಲಕೋಟೆ: ಈಗಲೂ ನಾವೇ, ಮುಂದೆಯೂ ನಾವೇ ಅಧಿಕಾರದಲ್ಲಿ ಇರುತ್ತೆವೆ. ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಗೆಲುವು ನಿಶ್ಚಿತ, ಅಧಿಕಾರಕ್ಕೆ ನಾವು ಬರುವುದು ಶತಸಿದ್ಧ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಬೇವಿನಮಟ್ಟಿ ಗ್ರಾಮದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿ, ಬಿಜೆಪಿಯವರು ಎಷ್ಟೇ ಅಪಪ್ರಚಾರ ಮಾಡಿದರೂ, ನಾವೇ ಗೆಲ್ಲುತ್ತೇವೆ, ಎರಡೂ ಕ್ಷೇತ್ರದಲ್ಲೂ ನಾವೇ ಗೆಲ್ಲುತ್ತೇವೆ. ಜತೆಗೆ 2028 ಕ್ಕೂ ನಾವೇ ಗೆದ್ದು ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದರು.

ತಲಾ ಆದಾಯದಲ್ಲಿ ನಾವು ದೇಶದಲ್ಲೇ ರಾಜ್ಯ ನಂಬರ್ ಒನ್ ಸ್ಥಾನದಲ್ಲಿದ್ದೇವೆ. ಆದ್ದರಿಂದ ದೇಶಕ್ಕೆ ಕಾಂಗ್ರೆಸ್ ಬೇಕು. ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ ಸ್ಥಾನದಲ್ಲಿದೆ. ನಮ್ಮಿಂದ ಉತ್ತಮ ಆಡಳಿತ ನಡೆಯುತ್ತಿದ್ದು, ಇದಕ್ಕಾಗಿ ನೀವು ಕಾಂಗ್ರೆಸ್ ಗೆಲ್ಲಿಸಬೇಕು ಎಂದರು.

ಶಿರೂರ, ಬಾಗಲಕೋಟೆಯ ನವನಗರ ವಾಂಬೇ ಕಾಲೊನಿಯಲ್ಲಿ ಪಕ್ಷದ ಅಭ್ಯರ್ಥಿ ಪರ ಪ್ರಚಾರ ನಡೆಸಿದರು. ಬಾಗಲಕೋಟೆಗೆ ಆಗಮಿಸಿದ ನಂತರ ನೇರವಾಗಿ ಮುಚಖಂಡಿ ವೀರಣ್ಣ ಹಾಗೂ ದುರ್ಗಾದೇವಿ ದರ್ಶನ ಪಡೆದು ಮುಖಂಡರ ಮನೆಗೆ ಭೇಟಿ ನೀಡಿದರು.

📢 To advertise on this website please call +91 99808 75054    |    ಸುದ್ದಿ ಹಾಗೂ ಜಾಹೀರಾತು ನೀಡಲು ಸಂಪರ್ಕಿಸಿ +91 99808 75054

Leave a Reply

Your email address will not be published. Required fields are marked *

© 2022–2026 Karavali Daily News. All Rights Reserved | Powered by webbrahma