ಉಡುಪಿ: ಪೋಷಕರು ತಮ್ಮ ಮಕ್ಕಳ ಆರೋಗ್ಯದ ಬಗ್ಗೆ ಗಮನ ಹರಿಸಬೇಕು. ಮೊಬೈಲ್ ಅನ್ನು ಹೆಚ್ಚು ಬಳಕೆ ಮಾಡದಂತೆ ಎಚ್ಚರ ವಹಿಸಬೇಕು. ಯೋಗ ಧ್ಯಾನ, ಪ್ರಾಣಾಯಾಮ, ಹೊರಾಂಗಣ ಕ್ರೀಡೆಗಳಲ್ಲಿ ಮಕ್ಕಳನ್ನು ತೊಡಗಿಸಬೇಕು. ಇದು ಉತ್ತಮ ಆರೋಗ್ಯಕ್ಕೆ ಪೂರಕ ಎಂದು ಉಡುಪಿ ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಸರ್ಜನ್ ಡಾ. ಎಚ್. ಅಶೋಕ್ ಅವರು ಹೇಳಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾ ಅಸಾಂಕ್ರಾಮಿಕ ರೋಗಗಳ ಘಟಕ, ಜಿಲ್ಲಾ ಆಸ್ಪತ್ರೆ ಎನ್.ಸಿ.ಡಿ ವಿಭಾಗ ಉಡುಪಿ, ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿಯಮಿತ (ಮಂಗಳೂರು), ಆದರ್ಶ ಮಲ್ಟಿ ಸ್ಪೆಷಾಲಿಟಿ, ಆಸ್ಪತ್ರೆ ಉಡುಪಿ ಭಾರತೀಯ ವೈದ್ಯಕೀಯ ಸಂಘ ಉಡುಪಿ ಕರಾವಳಿ, ಪ್ರಸಾದ್ ನೇತ್ರಾಲಯ ಉಡುಪಿ, ದಂತ ವೈದ್ಯಕೀಯ ವಿಭಾಗ ಕೆಎಂಸಿ ಮಣಿಪಾಲ, ಪ್ರಾಥಮಿಕ ಆರೋಗ್ಯ ಕೇಂದ್ರ ಕೊಳಲಗಿರಿ ಸಹಯೋಗದಲ್ಲಿ ವಿಶ್ವ ಆರೋಗ್ಯ ದಿನಾಚರಣೆ ಪ್ರಯುಕ್ತ ಉಚಿತ ಆರೋಗ್ಯ ತಪಾಸಣೆ ಮತ್ತು ಮಾಹಿತಿ ಶಿಬಿರ ಆರೋಗ್ಯಕ್ಕಾಗಿ ಒಟ್ಟಾಗಿ ವಿಜ್ಜಾನದೊಂದಿಗೆ ನಿಲ್ಲೋಣಎಂಬ ಘೋಷ ವಾಕ್ಯದೊಂದಿಗೆ ನಡೆದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ನಿಯಮಿತ ಮಂಗಳೂರು ಉಡುಪಿಯ ಅಧ್ಯಕ್ಷ ಕೊಡವೂರು ರವಿರಾಜ ಹೆಗ್ಡೆ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಗುಣಮಟ್ಟದ ಆಹಾರ ಸೇವನೆ ಮತ್ತು ಸ್ವಚ್ಛತೆಯತ್ತ ಹೆಚ್ಚು ಗಮನಹರಿಸಿ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಹಾಗೂ ಆರೋಗ್ಯ ಇಲಾಖೆಯಿಂದ ಪ್ರತಿವರ್ಷವೂ ಸಹ ಆರೋಗ್ಯ ಶಿಬಿರಗಳನ್ನು ಆಯೊಜಿಸಬೇಕು ಎಂದರು.
ಜಿಲ್ಲಾ ಅಸಾಂಕ್ರಾಮಿಕ ರೋಗಗಳ ಕಾರ್ಯಕ್ರಮಗಳ ಅಧಿಕಾರಿ ಡಾ. ಲತಾ ನಾಯಕ್ ಅವರು ಪ್ರಾಸ್ತಾವಿಕ ಮಾತನಾಡಿ, ಆರೋಗ್ಯಾಕ್ಕಾಗಿ ಒಟ್ಟಾಗಿ ವಿಜ್ಞಾನದೊಂದಿಗೆ ನಿಲ್ಲೋಣ ಎಂಬ ಘೋಷವಾಕ್ಯದೊಂದಿಗೆ ವಿಶ್ವ ಆರೋಗ್ಯ ದಿನ ಆರೋಗ್ಯ ಜಾಗೃತಿ ಮತ್ತು ವಿವಿಧ ರೀತಿಯ ಆರೋಗ್ಯ ತಪಾಸಣೆ ನಡೆಸುವುದರ ಮೂಲಕ ಅರ್ಥ ಪೂರ್ಣವಾಗಿ ಆಚರಿಸುತ್ತಿದ್ದೇವೆ ಎಂದರು.
ಕಾರ್ಯಕ್ರಮದಲ್ಲಿ ಹಾಲು ಒಕ್ಕೂಟದ ಉಪಾಧ್ಯಕ್ಷ ಉದಯ್ ಎಸ್ ಕೋಟ್ಯಾನ್ ಅವರು ಮಾತನಾಡಿ, ಆರೋಗ್ಯ ಇಲಾಖೆ ನಮ್ಮ ಒಕ್ಕೂಟವು ಎರಡು ಸಹ ಜನರ ಆರೋಗ್ಯದ ಕಾಳಿಜಿ ವಹಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದರು.
ಭಾರತೀಯ ವೈದ್ಯಕೀಯ ಸಂಘದ ಕಾರ್ಯದರ್ಶಿ ಡಾ.ಮಾನಸ್ ಅವರು ಮಾತನಾಡಿ, ವಿಶ್ವ ಆರೋಗ್ಯ ದಿನಾಚರಣೆ ಕೇವಲ ಆಚರಣೆ ಆಗಬಾರದು, ದೈಹಿಕ ಆರೋಗ್ಯದ ಜೊತೆಗೆ ಸಂಗೀತ ವ್ಯಾಯಾಮ ಹಾಗೂ ಕಲೆ ಕರಕುಶಲ ಚಟುವಟಿಕೆಗಳ ಮೂಲಕ ಒತ್ತಡ ರಹಿತ ಮಾನಸಿಕ ಆರೋಗ್ಯಕ್ಕೆ ಒತ್ತು ನೀಡಬೇಕು ಎಂದರು.
ಕ್ಯಾನ್ಸರ್ ತಜ್ಞ ಡಾ. ಅನಂತ ಎಸ್ ಮಠದ್, ಡಾ. ಆಶಿಕ್, ಡಾ. ಪೂಜಾ, ಡಾ.ಸುರೇಶ್ ನಾಯಕ್ಇದ್ದರು.
ಈ ಕಾರ್ಯಕ್ರಮದಲ್ಲಿ ಭಿತ್ತಿಪತ್ರವನ್ನು ಬಿಡುಗಡೆಗೊಳಿಸಲಾಯಿತು. ಆರೋಗ್ಯ ಶಿಕ್ಷಣಾಧಿಕಾರಿ ಚಂದ್ರಕಲಾ ನಿರೂಪಿಸಿದರು. ಜಿಲ್ಲಾ ಸಮಾಲೋಚಕಿ ಡಾ. ಅಂಜಲಿ ಸ್ವಾಗತಿಸಿದರು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಶಿಧರ್ ಜೈನ್ ವಂದಿಸಿದರು. ಸುಭಾಷ್ ಭಟ್ ಪ್ರಾರ್ಥಿಸಿದರು. ಆಪ್ತ ಸಮಾಲೋಚಕ ಮನು ಎಸ್ ಬಿ ಕಾರ್ಯಕ್ರಮವನ್ನು ಆಯೋಜಿಸಿದ್ದರು. ಶಿಬಿರದಲ್ಲಿ 220 ಸಿಬ್ಬಂದಿಗಳಿಗೆ ಆರೋಗ್ಯ ತಪಾಸಣೆ ನಡೆಸಲಾಯಿತು.





