ಬೀದರ್: ಎರಡು ದಿನಗಳ ಪತ್ರಕರ್ತರ ರಾಜ್ಯ ಸಮ್ಮೇಳನಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

Spread the love

ಬೀದರ್:‌ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿರುವ ಎರಡು ದಿನಗಳ 40 ನೇ ಪತ್ರಕರ್ತರ ರಾಜ್ಯ ಸಮ್ಮೇಳನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು.

ಸಮ್ಮೇಳನ ಅಂಗವಾಗಿ ರಾಜ್ಯ ಮಾತ್ರವಲ್ಲದೇ ಹೊರ ನಾಡಿನ ವಿವಿಧೆಡೆಯಿಂದ ಪತ್ರಕರ್ತರ ಸಮಾಗಮ ಆಗಿದ್ದಾರೆ. ಬೀದರ್ ನಗರದಲ್ಲಿ ಸಮ್ಮೇಳನಕ್ಕೆ ಸ್ವಾಗತ ಕೋರುವ ಕಟೌಟ್, ಬ್ಯಾನರ್‌ಗಳು ರಾರಾಜಿಸುತ್ತಿದ್ದು, ಹಬ್ಬದ ವಾತಾವರಣ ಉಂಟಾಗಿತ್ತು.

ಶನಿವಾರ ನಗರದಲ್ಲಿ ಸಮ್ಮೇಳನದ ನೆನಪಿಗೆ ಭವ್ಯ ಮೆರವಣಿಗೆಗೆ ನಡೆಯಿತು. ಇಲ್ಲಿನ ಬಸವೇಶ್ವರ ವೃತ್ತದಲ್ಲಿ ಪೌರಾಡಳಿತ ಸಚಿವ ರಹೀಂ ಖಾನ್ ಚಾಲನೆ ಅವರು ನೀಡಿದರು. ಬೈಲೂರಿನ ನಿಜಗುಣಾನಂದ ಸ್ವಾಮೀಜಿ, ಭಾಲ್ಕಿಯ ಶ್ರೀ ಗುರುಬಸವ ಪಟ್ಟದ್ದೇವರು ಮತ್ತು ಪ್ರತಿಮಾ ಬಹೇನ್ ಸಾನ್ನಿಧ್ಯ ವಹಿಸಿದ್ದರು. ಮೆರವಣಿಗೆಯಲ್ಲಿ 40 ಬೃಹತ್ ಕೊಡೆಗಳು, ವಿವಿಧ ಕಲಾ ತಂಡಗಳು ಮೆರವಣಿಗೆಯ ನಡೆಯಿತು. ಮೆರವಣಿಗೆ ಪ್ರಮುಖ ರಸ್ತೆಗಳ ಮೂಲಕ ಸಮ್ಮೇಳನ ನಡೆಯುವ ಸ್ಥಳಕ್ಕೆ ಬಂದು ಸೇರಿತು.

ಡಾ. ಭೀಮಣ್ಣ ಖಂಡ್ರೆ ವೇದಿಕೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮ್ಮೇಳನಕ್ಕೆ ಚಾಲನೆ ನೀಡಿದರು. ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಸ್ಮರಣ ಸಂಚಿಕೆ ಬಿಡುಗಡೆ ಮಾಡಿದರು. ಪೌರಾಡಳಿತ ಸಚಿವ ರಹೀಂ ಖಾನ್ ಛಾಯಾಚಿತ್ರ ಪ್ರದರ್ಶನ, ಸಂಸದ ಸಾಗರ್ ಖಂಡ್ರೆ ವ್ಯಂಗ್ಯ ಚಿತ್ರ ಪ್ರದರ್ಶನಕ್ಕೆ ಚಾಲನೆ ನೀಡಿದರು.

ಭಾಲ್ಕಿ ಡಾ. ಬಸವಲಿಂಗ ಪಟ್ಟದ್ದೇವರು ಮತ್ತು ಹಾರಕೂಡದ ಚನ್ನವೀರ ಶಿವಾಚಾರ್ಯರು ಸಾನಿಧ್ಯ ಹಾಗೂ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅಧ್ಯಕ್ಷತೆ ವಹಿಸಿದ್ದರು. ಪತ್ರಕರ್ತ ವಿಶ್ವೇಶ್ವರ ಭಟ್, ಮಾಜಿ ಸಚಿವ ರಾಜಶೇಖರ ಪಾಟೀಲ ಪಾಲ್ಗೊಂಡಿದ್ದರು. ಸಂಘದ ಜಿಲ್ಲಾಧ್ಯಕ್ಷ ಆನಂದ ದೇವಪ್ಪ ಮಾತನಾಡಿದರು. ಎಂಎಲ್‌ಸಿಗಳಾದ ಡಾ. ಚಂದ್ರಶೇಖರ ಪಾಟೀಲ, ಭೀಮರಾವ್ ಪಾಟೀಲ, ಶಾಸಕ ಶರಣು ಸಲಗರ, ಬಿಡಿಎ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ ಮುಖ್ಯ, ಶಾಹೀನ್ ಶಿಕ್ಷಣ ಸಂಸ್ಥೆಗಳ ಸಮೂಹದ ಅಧ್ಯಕ್ಷ ಡಾ. ಅಬ್ದುಲ್ ಖದೀರ್, ಗುರುದ್ವಾರ ಪ್ರಬಂಧಕ ಕಮಿಟಿ ಅಧ್ಯಕ್ಷ ಡಾ. ಬಲಬೀರಸಿಂಗ್, ಮುಖಂಡ ಗುರುನಾಥ ಕೊಳ್ಳೂರ ವಿಶೇಷ ಆಹ್ವಾನಿತರಾಗಿ ಭಾಗವಹಿಸಿದ್ದಾರೆ.

📢 To advertise on this website please call +91 99808 75054    |    ಸುದ್ದಿ ಹಾಗೂ ಜಾಹೀರಾತು ನೀಡಲು ಸಂಪರ್ಕಿಸಿ +91 99808 75054

Leave a Reply

Your email address will not be published. Required fields are marked *