ಮಂಗಳೂರು ವಿವಿ ಕಬಡ್ಡಿ: ಆಳ್ವಾಸ್ ಪುರುಷ, ಮಹಿಳಾ ತಂಡ ಚಾಂಪಿಯನ್

Spread the love

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಅಂತರ್ ಕಾಲೇಜು ಕಬಡ್ಡಿ ಪಂದ್ಯಾಟದಲ್ಲಿ ಆಳ್ವಾಸ್ ಕಾಲೇಜಿನ ಪುರುಷರ ಹಾಗೂ ಮಹಿಳೆಯರ ತಂಡ ಕ್ರಮವಾಗಿ 10 ಹಾಗೂ 17 ಬಾರಿ ಚಾಂಪಿಯನ್ಸ್ ಪಟ್ಟ ಪಡೆದುಕೊಂಡಿತು.

ಸುಳ್ಯದ ನೆಹರು ಮೆಮೋರಿಯಲ್ ಕಾಲೇಜಿನಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾನಿಲಯದ ಅಂತರ್ ಕಾಲೇಜು ಪುರುಷರ ಪಂದ್ಯಾಟದಲ್ಲಿ ಉಜಿರೆಯ ಎಸ್.ಡಿ.ಎಂ ಕಾಲೇಜಿನ ತಂಡವನ್ನು ಸೋಲಿಸಿ 10ನೇ ಬಾರಿ ರತ್ನವರ್ಮ ಹೆಗ್ಗಡೆ ರೋಲಿಂಗ್ ಟ್ರೋಪಿ ತನ್ನದಾಗಿಸಿಕೊಂಡಿತು. ಆಳ್ವಾಸ್ ತಂಡದ ಧನುಷ್ ಉತ್ತಮ ಹಿಡಿತಗಾರ ಹಾಗೂ ಸಾಯಿ ಪ್ರಸಾದ ಉತ್ತಮ ದಾಳಿಗಾರ ವೈಯಕ್ತಿಕ ಪ್ರಶಸ್ತಿಯನ್ನು ಪಡೆದುಕೊಂಡರು

ಉಡುಪಿಯ ಪೂರ್ಣಪ್ರಜ್ಞಾ ಕಾಲೇಜಿನಲ್ಲಿ ಮಹಿಳೆಯರ ಅಂತರ್ ಕಾಲೇಜು ಕಬಡ್ಡಿ ಪಂದ್ಯಾಟದಲ್ಲಿ ಉಜಿರೆಯ ಎಸ್.ಡಿ.ಎಂ ಕಾಲೇಜಿನ ತಂಡವನ್ನು ಪರಾಭವಗೊಳಿಸಿ ರೆವರೆಂಟ್ ಫಾದರ್ ಪತ್ರಾವೋ ರೋಲಿಂಗ್ ಟ್ರೋಫಿ ಹಾಗೂ ಶಾಶ್ವತ ಫಲಕವನ್ನು 17ನೇ ಬಾರಿ ತನ್ನದಾಗಿಸಿಕೊಂಡಿತು. ಆಳ್ವಾಸ್‌ನ ವಿನುಶ್ರೀ ಉತ್ತಮ ಹಿಡಿತಗಾರ್ತಿ ಪ್ರಶಸ್ತಿ ಪಡೆದರೆ, ಸುಶ್ಮಿತಾ ಉತ್ತಮ ದಾಳಿಗಾರ್ತಿ ಪ್ರಶಸ್ತಿ ಪಡೆದರು.
ವಿಜೇತ ಅವಳಿ ತಂಡವನ್ನು ಆಳ್ವಾಸ್ ಸಂಸ್ಥೆಯ ಅಧ್ಯಕ್ಷ ಡಾ ಎಂ ಮೋಹನ್ ಆಳ್ವ ಅಭಿನಂದಿಸಿದ್ದಾರೆ.

📢 To advertise on this website please call +91 99808 75054    |    ಸುದ್ದಿ ಹಾಗೂ ಜಾಹೀರಾತು ನೀಡಲು ಸಂಪರ್ಕಿಸಿ +91 99808 75054

Leave a Reply

Your email address will not be published. Required fields are marked *

© 2022–2026 Karavali Daily News. All Rights Reserved | Powered by webbrahma