ನವದೆಹಲಿ: ಸಿಬಿಎಸ್‌ಇ 10ನೇ ತರಗತಿ ಪರೀಕ್ಷೆ ಫಲಿತಾಂಶ ಬುಧವಾರ ಪ್ರಕಟ ಆಗಿದ್ದು, ಶೇ 93.70 ರಷ್ಟು ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ಈ ಬಾರಿ ಸಿಬಿಎಸ್ಇ 10ನೇ ತರಗತಿ ಪರೀಕ್ಷೆಯಲ್ಲಿ ಬಾಲಕಿಯರು ಮೇಲುಗೈ ಸಾಧಿಸಿದ್ದಾರೆ. ಶೇ 94.99 ರಷ್ಟು ವಿದ್ಯಾರ್ಥಿನಿಯರು ಉತ್ತೀರ್ಣರಾಗಿದ್ದಾರೆ. ಬಾಲಕರಿಗಿಂತ ಬಾಲಕಿಯರು ಶೇ 1.3 ರಷ್ಟು ಹೆಚ್ಚು ಸಾಧನೆ ಮಾಡಿದ್ದಾರೆ.
2.20 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಶೇ 90 ಕ್ಕಿಂತ ಹೆಚ್ಚು ಅಂಕ ದಾಖಲಿಸಿದ್ದಾರೆ. 55,000 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಶೇ 95 ಕ್ಕಿಂತ ಹೆಚ್ಚು ಅಂಕ ಪಡೆದಿದ್ದಾರೆ.
ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಫಲಿತಾಂಶದಲ್ಲಿ ಕೊಂಚ ಏರಿಕೆ ಕಂಡಿದೆ.
ನವದೆಹಲಿ: ಸಿಬಿಎಸ್ ಸಿ 10 ನೇ ತರಗತಿ ಫಲಿತಾಂಶ ಪ್ರಕಟ, ಶೇ 93.70 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ





