ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ನೀಡುವ ವಿವಿಧ ಪ್ರಶಸ್ತಿಗಳಿಗೆ ಹಲವು ಸಾಧಕರನ್ನು ಆಯ್ಕೆ ಮಾಡಲಾಗಿದ್ದು, 2025 26 ನೇ ಸಾಲಿನ ಪ್ರತಿಷ್ಠಿತ ಬಸವ ರಾಷ್ಟ್ರೀಯ ಪುರಸ್ಕಾರಕ್ಕೆ ಸಿದ್ದರಾಮ ಶರಣರು ಬೆಲ್ದಾಳ, ಭಗವಾನ್ ಮಹಾವೀರ ಶಾಂತಿ ರಾಷ್ಟ್ರೀಯ ಪುರಸ್ಕಾರಕ್ಕೆ ಭಾನುಕೀರ್ತಿ ಭಟ್ಟಾರಕ ಸ್ವಾಮೀಜಿ, ಕಂಬದಹಳ್ಳಿ, ಪಂಪ ಪ್ರಶಸ್ತಿಗೆ ಖ್ಯಾತ ಸಾಹಿತಿ ದೇವನೂರು ಮಹಾದೇವ ಅವರು ಭಾಜನರಾಗಿದ್ದಾರೆ ಎಂದು ಸಚಿವ ಶಿವರಾಜ ತಂಗಡಗಿ ತಿಳಿಸಿದ್ದಾರೆ.

ಕೆ ಜಿ ಕುಂದಣಗಾರ ಗಡಿನಾಡ ಸಾಹಿತ್ಯ ಪ್ರಶಸ್ತಿಗೆ ಅಲ್ಲಾಭಕ್ಷ್ ಮೀರಸಾಹೇಬ ಮಿರ್ಜಿ, ದಾನಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿಗೆ ಡಾ. ಸುಕನ್ಯಾ ಮಾರುತಿ, ಡಾ. ಗುಬ್ಬಿ ವೀರಣ್ಣ ಪ್ರಶಸ್ತಿಗೆ ಜಿ. ವಿ. ಶಾರದಾ, ಬಿ ವಿ ಕಾರಂತ ಪ್ರಶಸ್ತಿಗೆ ಪ್ರಸನ್ನ ಶಿವಮೊಗ್ಗ, ಡಾ. ಸಿದ್ದಲಿಂಗಯ್ಯ ಸಾಹಿತ್ಯ ಪ್ರಶಸ್ತಿಗೆ ಗಂಗಾರಾಮ ಚಂಡಾಳ ಕೋಲಾರ. ವರ್ಣಶಿಲ್ಪಿ ವೆಂಕಟಪ್ಪ ಪ್ರಶಸ್ತಿಗೆ ವಿ ಹರಿರಾಮ್, ಜಕಣಾಚಾರಿ ಪ್ರಶಸ್ತಿಗೆ ಅಶೋಕ್ ಗುಡಿಗಾರ್, ಜಾನಪದ ಪ್ರಶಸ್ತಿಗೆ ಎಂ. ಮಹದೇವಯ್ಯ ಹಾಗೂ ಬಿ. ಲಕ್ಷ್ಮಣ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಸಂಗೊಳ್ಳಿ ರಾಯಣ್ಣ ಪ್ರಶಸ್ತಿ ಸಿದ್ದನಗೌಡ ಪಾಟೀಲ್, ಅಕ್ಕಮಹಾದೇವಿ ಪ್ರಶಸ್ತಿಗೆ ಕೆ. ನೀಲಾ, ಕಾಯಕಯೋಗಿ ಸಿದ್ದರಾಮೇಶ್ವರ ಪ್ರಶಸ್ತಿಗೆ ಪ್ರೊ. ಎಸ್. ಜಿ. ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿದೆ. ಕುಮಾರವ್ಯಾಸ ಪ್ರಶಸ್ತಿಗೆ- ಕಲ್ಲಿನಾಥ ಶಾಸ್ತ್ರಿ, ಗದಗ, ನಾಟ್ಯರಾಣಿ ಶಾಂತಲಾ ಪ್ರಶಸ್ತಿಗೆ ಪ್ರತಿಭಾ ಪ್ರಹ್ಲಾದ್ ಅವರನ್ನು ಆಯ್ಕೆ ಮಾಡಲಾಗಿದ್ದು, ಎಲ್ಲಾ ಪ್ರಶಸ್ತಿ ಪುರಸ್ಕೃತರನ್ನು ಅಭಿನಂದಿಸಲಾಗುತ್ತದೆ. ಶೀಘ್ರದಲ್ಲಿಯೇ ಪ್ರಶಸ್ತಿ ಪ್ರಧಾನ ಸಮಾರಂಭ ಆಯೋಜನೆಡಲಾಗುವುದು ಎಂದು ತಿಳಿಸಿದ್ದಾರೆ.





