ಶಿಕ್ಷಣದಲ್ಲಿ ನಿಮ್ಮ ಕಲಬುರಗಿ ಜಿಲ್ಲೆಯ ಸಾಧನೆ ಏನು ಸ್ಪಷ್ಟಪಡಿಸಿ: ಸಚಿವ ಪ್ರಿಯಾಂಕ್ ಖರ್ಗೆಗೆ ಶಾಸಕ ಡಾ. ಭರತ್ ಶೆಟ್ಟಿ ಸವಾಲು

ಭರತ್ ಶೆಟ್ಟಿ

ಮಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಹೊರಬಿದ್ದಿದ್ದು, ದಕ್ಷಿಣ ಕನ್ನಡ ಜಿಲ್ಲೆ ರಾಜ್ಯಕ್ಕೆ ಟಾಪರ್ ಸ್ಥಾನದಲ್ಲಿ ಇದ್ದು, ಕಲಬುರಗಿ ಜಿಲ್ಲೆಯ ಸಾಧನೆ ಕೊನೆಯ ಸ್ಥಾನದಲ್ಲಿ ಇದ್ದು, ದಕ್ಷಿಣ ಕನ್ನಡ ಜಿಲ್ಲೆಯನ್ನು ಟೀಕಿಸುವ ಬದಲು ಇನ್ನಾದರೂ ತಮ್ಮ ಜಿಲ್ಲೆಯಲ್ಲಿಯೇ ಉಳಿದುಕೊಂಡು ಶಿಕ್ಷಣ ಕ್ಷೇತ್ರವನ್ನು ಸುಧಾರಿಸುವುದಕ್ಕೆ ಆದ್ಯತೆ ನೀಡಬೇಕು ಎಂದು ಶಾಸಕ ಡಾ. ಭರತ್ ಶೆಟ್ಟಿ ಅವರು ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಸಲಹೆ ನೀಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆ ಸದಾ ಟೀಕಿಸುತ್ತಿರುವ ಪ್ರಿಯಾಂಕ ಖರ್ಗೆ ಇನ್ನಾದರೂ ಶಿಕ್ಷಣ ಕ್ಷೇತ್ರ ಮೇಲಕ್ಕೆತ್ತಲು ಶ್ರಮವಹಿಸಬೇಕು. ದಕ್ಷಿಣ ಕನ್ನಡ ಜಿಲ್ಲೆ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಪ್ರಥಮ ಸ್ಥಾನ ಪಡೆದ್ದು, ಕಲಬುರಗಿ ಜಿಲ್ಲೆ ಕೊನೆ ಸ್ಥಾನದಲ್ಲಿ ಇರುವುದು ಸಚಿವರ ಜಿಲ್ಲೆಯ ಶಿಕ್ಷಣ ವ್ಯವಸ್ಥೆ ಹಿಂದುಳಿದಿದೆ ಎನ್ನುವುದಕ್ಕೆ ಸಾಕ್ಷಿಕರಿಸಿದೆ ಎಂದರು.

ಸಚಿವ ಪ್ರಿಯಾಂಕ್ ಖರ್ಗೆ ಅವರು ದಕ್ಷಿಣ ಕನ್ನಡ ಜಿಲ್ಲೆಯ ಬಗ್ಗೆ ಟೀಕೆ ಮಾಡುವುದನ್ನು ಬಿಟ್ಟು, ತಮ್ಮ ಜಿಲ್ಲೆಯ ಅಭಿವೃದ್ಧಿ ಕಡೆ ಗಮನ ಹರಿಸಬೇಕು. ದಕ್ಷಿಣ ಕನ್ನಡ ಜಿಲ್ಲೆ ಆರೋಗ್ಯ, ಶಿಕ್ಷಣ ಹಾಗೂ ಮೂಲಸೌಕರ್ಯ ಕ್ಷೇತ್ರಗಳಲ್ಲಿ ಮುಂದಿದ್ದು, ಕಲಬುರಗಿ ಜಿಲ್ಲೆ ಇನ್ನೂ ಅನೇಕ ವಿಷಯಗಳಲ್ಲಿ ಹಿಂದೆ ಉಳಿದಿದೆ ಎಂದರು.

ಐಟಿ ಸಚಿವರಾಗಿ ತಮ್ಮ ಜಿಲ್ಲೆಗೆ ನೀಡಿದ ಕೊಡುಗೆಗಳ ಬಗ್ಗೆ ಪ್ರಶ್ನೆ ಎತ್ತಿದ ಅವರು, ಜಿಲ್ಲೆಯ ಅಭಿವೃದ್ಧಿ ಮೂಲಕ ನಿಮ್ಮ ಸಾಮರ್ಥ್ಯ ತೋರಿಸಿ ಎಂದು ಶಾಸಕ ಡಾ. ಭರತ್ ಶೆಟ್ಟಿ ಅವರು ಸಲಹೆ ನೀಡಿದ್ದಾರೆ.

📢 To advertise on this website please call +91 99808 75054    |    ಸುದ್ದಿ ಹಾಗೂ ಜಾಹೀರಾತು ನೀಡಲು ಸಂಪರ್ಕಿಸಿ +91 99808 75054

Leave a Reply

Your email address will not be published. Required fields are marked *

© 2022–2026 Karavali Daily News. All Rights Reserved | Powered by webbrahma