ಬೆಂಗಳೂರು: ಸಿಇಟಿ ಪರೀಕ್ಷಾರ್ಥಿಗಳ ಜನಿವಾರ ತೆಗೆಸಿದ ವಿಚಾರಕ್ಕೆ ಸಂಬಂಧಿಸಿದಂತೆ ಕೃಪಾನಿಧಿ ಕಾಲೇಜಿನ ಮೂವರು ಸಿಬ್ಬಂದಿ ನಗರದ ಮಡಿವಾಳ ಠಾಣೆ ಪೊಲೀಸರು ವಶಕ್ಕೆ ಪಡೆದಿರುವುದಾಗಿ ವರದಿ ಆಗಿದೆ.
ವಿದ್ಯಾರ್ಥಿ ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡು, ಪರೀಕ್ಷಾ ಪರಿವೀಕ್ಷಕ ಸರಿತಾ, ಗಿರಿಜಾ ಹಾಗೂ ಪರೀಕ್ಷೆ ಕೇಂದ್ರದ ಉಸ್ತುವಾರಿ ಸುಧಾಕರ್ ಎಂಬುವರನ್ನು ವಶಕ್ಕೆ ಪಡೆಯಲಾಗಿದ್ದು, ಈ ಸಂಬಂಧ ಬಿಎನ್‍ಎಸ್ ಕಾಯ್ದೆ ಅಡಿಯಲ್ಲಿ ಎಫ್‍ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ವಿವಾದ ಕುರಿತಂತೆ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಅವರನ್ನು ಭೇಟಿ ಮಾಡಿದ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಸಂಸದ ತೇಜಸ್ವಿ ಸೂರ್ಯ ಕೂಡ ದೂರು ನೀಡಿದ್ದು, ಕ್ರಮಕ್ಕೆ ಆಗ್ರಹಿಸಿದ್ದಾರೆ.





