ಮಂಗಳೂರು: ನಗರದ ಮಿಲಾಗ್ರಿಸ್ ಕಾಲೇಜು, ಐ.ಸಿ.ವೈ.ಎಂ. ಮಂಗಳೂರು ಧರ್ಮಪ್ರಾಂತ್ಯ ಹಾಗೂ ಮಂಗಳೂರು ರನ್ನರ್ಸ್ ಕ್ಲಬ್ ಜಂಟಿ ಆಶ್ರಯದಲ್ಲಿ ‘ಅಪೆಕ್ಸ್ ರನ್ 2026’ ಮ್ಯಾರಥಾನ್ ಓಟವನ್ನು ಮೇ 10ರಂದು ಹಮ್ಮಿಕೊಳ್ಳಲಾಗಿದೆ ಎಂದು ಫಾ. ಆಲ್ವಿನ್ ಸೆರಾವೋ ಅವರು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಬೆಳಿಗ್ಗೆ 5 ಗಂಟೆಗೆ ಮಿಲಾಗ್ರಿಸ್ ಕಾಲೇಜು ಆವರಣದಲ್ಲಿ ಈ ಓಟಕ್ಕೆ ಚಾಲನೆ ಸಿಗಲಿದ್ದು, 2500ಕ್ಕೂ ಹೆಚ್ಚು ಓಟಗಾರರು ಭಾಗವಹಿಸುವ ನಿರೀಕ್ಷೆಯಿದೆ. ದೈಹಿಕ ಕ್ಷಮತೆ, ಆರೋಗ್ಯ ಜಾಗೃತಿ ಮತ್ತು ಯುವಜನರಲ್ಲಿ ಸಮುದಾಯದ ಒಗ್ಗಟ್ಟ ಅನ್ನು ಉತ್ತೇಜಿಸುವ ಉದ್ದೇಶದಿಂದ ಈ ನಗರ ಮಟ್ಟದ ಮ್ಯಾರಾಥಾನ್ ಆಯೋಜಿಸಲಾಗಿದೆ. 176 ವರ್ಷಗಳ ಸುದೀರ್ಘ ಇತಿಹಾಸವಿರುವ ಮಿಲಾಗ್ರಿಸ್ ಶಿಕ್ಷಣ ಸಂಸ್ಥೆಗಳ ಘಟಕ ಮಿಲಾಗ್ರಿಸ್ ಕಾಲೇಜು, ಗುಣಮಟ್ಟದ ಶಿಕ್ಷಣದೊಂದಿಗೆ ಇಂತಹ ಸಾಮಾಜಿಕ ಚಟುವಟಿಕೆಗಳಿಗೂ ಸದಾ ಪ್ರೋತ್ಸಾಹ ನೀಡುತ್ತಾ ಬಂದಿದೆ ಎಂದರು.
ಈ ಮ್ಯಾರಾಥಾನ್ ಮೂರು ವಿಭಾಗಗಳಲ್ಲಿ ನಡೆಯಲಿದ್ದು, 3 ಕಿಲೋ ಮೀಟರ್ ಓಟಕ್ಕೆ ರೂಪಾಯಿ 250, 5 ಕಿಲೋ ಮೀಟರ್ ಓಟಕ್ಕೆ ರೂಪಾಯಿ 350 ಹಾಗೂ 10 ಕಿಲೋ ಮೀಟರ್ ಓಟಕ್ಕೆ ರೂ. 450 ನೋಂದಣಿ ಶುಲ್ಕ ನಿಗದಿ ಪಡಿಸಲಾಗಿದೆ. 5 ಕಿಲೋ ಮೀಟರ್ ಮತ್ತು 10 ಕಿಲೋ ಮೀಟರ್ ವಿಭಾಗದ ವಿಜೇತರಿಗೆ ಕ್ರಮವಾಗಿ ರೂ. 5000 ಹಾಗೂ ರೂ. 3000 ನಗದು ಬಹುಮಾನದೊಂದಿಗೆ ಟ್ರೋಫಿ ನೀಡಲಾಗುವುದು. ಭಾಗವಹಿಸುವ ಎಲ್ಲ ಸ್ಪರ್ಧಿಗಳಿಗೆ ಟಿ-ಶರ್ಟ್, ಬಿಬ್ ಸಂಖ್ಯೆ, ಫಿನಿಷರ್ ಪದಕ, ಉಪಾಹಾರ ಮತ್ತು ಪ್ರಮಾಣಪತ್ರ ನೀಡಲಾಗುವುದು ಎಂದು ತಿಳಿಸಿದರು.
ವಿಶೇಷ ಆಕರ್ಷಣೆಯಾಗಿ ಇನ್ಸಾಗ್ರಾಮ್ನಲ್ಲಿ ಅತೀ ಹೆಚ್ಚು ವೀಕ್ಷಣೆ ಪಡೆದ ರೀಲ್ಸ್ಗೆ ರೂ10,000 ನಗದು ಬಹುಮಾನ ಹಾಗೂ ಅತೀ ಹೆಚ್ಚು ಸಂಖ್ಯೆಯಲ್ಲಿ ಭಾಗವಹಿಸುವ ಸಂಸ್ಥೆಗೆ ವಿಶೇಷ ಟ್ರೋಫಿ ನೀಡಲಾಗುವುದು. ಈಗಾಗಲೇ ನೋಂದಣಿ ಪ್ರಕ್ರಿಯೆ ಆರಂಭವಾಗಿದ್ದು, ಆಸಕ್ತರು ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡುವ ಮೂಲಕ ಹೆಸರು ದಾಖಲಿಸಬಹುದು. ‘ಮಿತಿಗಳನ್ನು ಮೀರಿ ಓಡಿ’ ಎಂಬ ಸಂದೇಶದೊಂದಿಗೆ ನಡೆಯುವ ಈ ಕ್ರೀಡಾಕೂಟದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಎಂದರು.
ಪತ್ರಿಕಾಗೋಷ್ಠಿಯಲ್ಲಿ ಡೆನ್ಜಿಲ್ ಸೆಲೆಸ್ಟೈನ್ ಡಿಕೋಸ್ಟಾ, ಮಮತಾ ಶೆಟ್ಟಿ ಸೇರಿದಂತೆ ಹಲವರು ಇದ್ದರು.





