ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷರಾಗಿ ಅಜಿತ್ ಕುಮಾರ್ ರೈ ಮಾಲಾಡಿ ಪುನರಾಯ್ಕೆ

3001

ಮಂಗಳೂರು: ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಹಾಗೂ ವಿದೇಶಗಳಲ್ಲೂ ಸದಸ್ಯರನ್ನು ಒಳಗೊಂಡ ಬಂಟರ ಯಾನೆ ನಾಡವರ ಮಾತೃ ಸಂಘದ 2026 -29 ರ ಸಾಲಿಗೆ ಮಾಲಾಡಿ ಅಜಿತ್‌ ಕುಮಾರ್ ರೈ ಕೊಡಿಯಾಲ್ ಗುತ್ತು ಅಧ್ಯಕ್ಷರಾಗಿ ಪುನರಾಯ್ಕೆ ಆಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಮುಂದಿನ ದಿನಗಳಲ್ಲಿ ಸಂಘದ ಮಹತ್ವಾಕಾಂಕ್ಷೆ ಯೋಜನೆ ಶತಮಾನೋತ್ಸವ ಕಟ್ಟಡ ಸಂಕೀರ್ಣ, ವಿಶ್ವವ್ಯಾಪಿ ಸಮಾಜ ಬಾಂಧವರನ್ನು ಒಂದೇ ಸೂರಿನಡಿ ತರ ಬಯಸುವ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯನ್ನು ಕೈಗೊಳ್ಳುವುದು ಹಾಗೂ ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುವೆ ಎಂದು ಕೆ ಅಜಿತ್ ಕುಮಾರ್ ರೈ ಹೇಳಿದರು.
ಮುಖ್ಯ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ ವಕೀಲ ಉಮೇಶ್ ಶೆಟ್ಟಿ ಶೆಡ್ಡೆ ಹೊಸಲಕ್ಕೆ ಅವರು ಅಧ್ಯಕ್ಷರ ಅವಿರೋಧ ಆಯ್ಕೆ ಘೋಷಿಸಿದರು. ಉಪ ಚುನಾವಣಾಧಿಕಾರಿ, ವಕೀಲ ನವೀನ್ ಶೆಟ್ಟಿ ಹಾಗೂ ಚುನಾವಣಾಧಿಕಾರಿ ಸದಾಶಿವ ಶೆಟ್ಟಿ ಅವರು ಇದ್ದರು.

📢 To advertise on this website please call +91 99808 75054    |    ಸುದ್ದಿ ಹಾಗೂ ಜಾಹೀರಾತು ನೀಡಲು ಸಂಪರ್ಕಿಸಿ +91 99808 75054

Leave a Reply

Your email address will not be published. Required fields are marked *

© 2022–2026 Karavali Daily News. All Rights Reserved | Powered by webbrahma